ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ ಕೇಂದ್ರದ ಕೊಠಡಿ ಮುಂದೆಯೇ ಮಲವಿಸರ್ಜಿಸಿದ ತಬ್ಲೀಗಿ ಜಮಾತ್‌ ಸದಸ್ಯರು!

Last Updated 7 ಏಪ್ರಿಲ್ 2020, 10:05 IST
ಅಕ್ಷರ ಗಾತ್ರ

ನವದೆಹಲಿ: ತಬ್ಲೀಗ್‌ ಜಮಾತ್‌ನ ಸದಸ್ಯರು ಕ್ವಾರಂಟೈನ್‌ ಸೆಂಟರ್‌ನ ಕೊಠಡಿಯ ಮುಂಭಾಗದಲ್ಲೇ ಮಲವಿಸರ್ಜನೆ ಮಾಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

ದೆಹಲಿಯ ನರೇಲಾದಲ್ಲಿನ ಕ್ವಾರಂಟೈನ್‌ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಕ್ವಾರಂಟೈನ್‌ನಲ್ಲಿರುವ ಆರೋಪಿಗಳು ನಿಜಾಮುದ್ದೀನ್‌ ಪ್ರದೇಶದ ತಬ್ಲೀಗ್‌ ಜಮಾತ್‌ನಲ್ಲಿ ಕಳೆದ ತಿಂಗಳು ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ಇಬ್ಬರೂ ಆರೋಪಿಗಳು ಉತ್ತರ ಪ್ರದೇಶದ ಬಾರಾಬಂಕಿ ನಿವಾಸಿಗಳಾಗಿದ್ದಾರೆ.

ಕ್ವಾರಂಟೈನ್‌ ಕೇಂದ್ರದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 212ರ ಮುಂಭಾಗದಲ್ಲಿ ಇಬ್ಬರು ಮಲವಿಸರ್ಜನೆ ಮಾಡಿದ್ದಾರೆ. ಈ ಕುರಿತು ಶನಿವಾರ ಕ್ವಾರಂಟೈನ್‌ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಸುವ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ವಚ್ಛತಾ ಕಾರ್ಯ ನಡೆಸುವ ಸಿಬ್ಬಂದಿ ಮತ್ತು ಹೌಸ್‌ ಕೀಪಿಂಗ್‌ ಸೂಪರ್‌ವೈಸರ್‌ ಘಟನೆಯ ವರದಿ ಮಾಡಿದ್ದಾರೆ. ಕೊರೊನಾ ಸೋಂಕು ವ್ಯಾಪಿಸದಂತೆ ತಡೆಯಲು ಆರೋಗ್ಯ ಇಲಾಖೆ ಹಾಗೂ ಸರ್ಕಾರ ನೀಡಿರುವ ಸೂಚನೆಗಳನ್ನು ಕೊಠಡಿಗಳಲ್ಲಿ ಪ್ರತ್ಯೇಕವಾಗಿರಸಲಾಗಿರುವ ವ್ಯಕ್ತಿಗಳು ಅನುಸರಿಸುತ್ತಿಲ್ಲ. ಅವರು ಇತರರ ಜೀವಗಳನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಈವರೆಗೆ ಕೋವಿಡ್‌–19ನಿಂದ ಸಾವಿಗೀಡಾಗಿರುವವ ಪೈಕಿ 15 ಮಂದಿ ತಬ್ಲೀಗಿ ಜಮಾತ್‌ ಕಾರ್ಯಕ್ರಮದೊಂದಿಗೆ ನಂಟು ಹೊಂದಿದ್ದವರಾಗಿದ್ದಾರೆ. ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಕನಿಷ್ಠ 9,000 ಜನರು ದೇಶದ ಹಲವು ಭಾಗಗಳಲ್ಲಿ ಸಂಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT