ಶನಿವಾರ, ಏಪ್ರಿಲ್ 4, 2020
19 °C

ಕೋವಿಡ್-19: ತಮಿಳುನಾಡಿನಲ್ಲಿ ಓರ್ವ ವ್ಯಕ್ತಿ ಸಾವು; ದೇಶದಲ್ಲಿ ಸಾವಿನ ಸಂಖ್ಯೆ 11

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

covid19

ನವದೆಹಲಿ: ತಮಿಳುನಾಡಿನಲ್ಲಿ ಕೋವಿಡ್-19 ಸೋಂಕಿನಿಂದ 54ರ ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಇದೀಗ ಭಾರತದಲ್ಲಿ ಸೋಂಕು ತಗುಲಿ ಸಾವಿಗೀಡಾದವರ ಸಂಖ್ಯೆ 11ಕ್ಕೇರಿದೆ. ಸೋಂಕು ಪ್ರಕರಣಗಳ ಸಂಖ್ಯೆ 545 ಆಗಿದೆ.

ತಮಿಳುನಾಡಿನ ಮದುರೈನಲ್ಲಿ ಸಾವಿಗೀಡಾದ ವ್ಯಕ್ತಿ ಹಲವು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅಧಿಕ ರಕ್ತದೊತ್ತಡ ಮತ್ತು ಕಾಯಿಲೆ ಇತ್ತು ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಇವರು ಹೊರದೇಶಕ್ಕೆ ಹೋಗಿ ಬಂದವರಾಗಿರಲಿಲ್ಲ.

ತೆಲಂಗಾಣದಲ್ಲಿ ಮತ್ತೆರಡು ಪ್ರಕರಣ
ತೆಲಂಗಾಣ ಡಿಎಸ್‌ಪಿಯ ಪುತ್ರನಿಗೆ ಕೊರೊನಾ ಸೋಂಕು ಇದೆ ಎಂದು ದೃಢಪಟ್ಟಿದೆ. ಬ್ರಿಟನ್‌ನಿಂದ ಮರಳಿದ ಇವರು ಮತ್ತು ಇವರೊಂದಿಗೆ ಬಂದ ಮನೆಕೆಲಸದಾಕೆಗೂ ಸೋಂಕು ಇದೆ. ಅದೇ ವೇಳೆ ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದ ಡಿಎಸ್‌ಪಿ ಮತ್ತು ಅವರ ಪುತ್ರನ ವಿರುದ್ಧ ತೆಲಂಗಾಣ ಪೊಲೀಸರು ದೂರು ದಾಖಲಿಸಿದ್ದಾರೆ.  ತೆಲಂಗಾಣದಲ್ಲಿ ಇಲ್ಲಿಯವರೆಗೆ 39 ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಗುಣಮುಖರಾಗಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು