ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19: ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ 29ಕ್ಕೆ ಏರಿಕೆ

Last Updated 5 ಮಾರ್ಚ್ 2020, 4:42 IST
ಅಕ್ಷರ ಗಾತ್ರ

ನವದೆಹಲಿ: ಹರಿಯಾಣ ಗುರುಗ್ರಾಮದ ಪೇಟಿಎಂ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ (ಕೋವಿಡ್‌19) ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕುಪೀಡಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಸೋಂಕುಪೀಡಿತ ವ್ಯಕ್ತಿ ಕೆಲವು ದಿನಗಳ ಹಿಂದಷ್ಟೇ ಇಟಲಿ ಪ್ರವಾಸ ಮುಗಿಸಿ ವಾಪಸಾಗಿದ್ದರು.

‘ಇತ್ತೀಚೆಗಷ್ಟೇ ಇಟಲಿ ಪ್ರವಾಸ ಮುಗಿಸಿ ಬಂದಿರುವ ನಮ್ಮ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಲು ಇನ್ನಷ್ಟು ಕ್ರಮ ಕೈಗೊಳ್ಳಲಿದ್ದೇವೆ. ಅಲ್ಲಿವರೆಗೂ ಕೆಲವು ದಿನಗಳ ಮಟ್ಟಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಎಲ್ಲ ಉದ್ಯೋಗಿಗಳಿಗೆ ಸೂಚಿಸಲಾಗಿದೆ. ಪೇಟಿಎಂ ಕಾರ್ಯನಿರ್ವಹಣೆ ಎಂದಿನಂತೆ ನಡೆಯುತ್ತದೆ’ ಎಂದು ಕಂಪನಿಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ದೇಶದಲ್ಲಿ 28 ಕೊರೊನಾ ಪ್ರಕರಣ ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಬುಧವಾರ ತಿಳಿಸಿದ್ದರು. ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸುವಂತೆ ಸೂಚನೆ ನೀಡಲಾಗಿದೆ ಎಂದೂ ಅವರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT