ಶುಕ್ರವಾರ, ಸೆಪ್ಟೆಂಬರ್ 17, 2021
26 °C

ಭಾರತದಲ್ಲಿ ಕೊರೊನಾ ಸೋಂಕು:  24 ಗಂಟೆಗಳಲ್ಲಿ 704 ಹೊಸ ಪ್ರಕರಣ, 28 ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ಏರಿಕೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟಿರುವ 704 ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ ಒಂದೇ ದಿನದಲ್ಲಿ ದಾಖಲಾಗಿರುವ ಅತಿ ಹೆಚ್ಚು ಪ್ರಕರಣಗಳ ಪ್ರಮಾಣ ಇದಾಗಿದೆ. 

704 ಹೊಸ ಪ್ರಕರಣಗಳ ಜೊತೆಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 4,281ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ. 

ಕಳೆದ 24 ಗಂಟೆಗಳಲ್ಲಿ 28 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 4,281 ಪ್ರಕರಣಗಳ ಪೈಕಿ ಸಾವಿಗೀಡಾದವರ ಸಂಖ್ಯೆ 111 ಮುಟ್ಟಿದೆ. ದೇಶದಾದ್ಯಂತ ಈವರೆಗೆ 318 ಮಂದಿ ಕೋವಿಡ್‌–19 ಪೀಡಿತರು ಗುಣಮುಖರಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು