ಶನಿವಾರ, ಅಕ್ಟೋಬರ್ 19, 2019
22 °C

ಕಾರ್ಪೊರೇಟ್‌ ತೆರಿಗೆ ಕಡಿತದಿಂದಾಗಿ ಉದ್ಯೋಗವಕಾಶ ಸೃಷ್ಟಿ: ನರೇಂದ್ರ ಮೋದಿ

Published:
Updated:

ನವದೆಹಲಿ: ದೇಶಿಯ ಹಾಗೂ ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೊರೇಟ್‌ ತೆರಿಗೆಯನ್ನು ಕಡಿತ ಮಾಡಿರುವ ವಿತ್ತ ಸಚಿವಾಲಯದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.  

ಕಾರ್ಪೊರೇಟ್ ತೆರಿಗೆ ಕಡಿತ ಮಾಡುವುದರಿಂದ ಬಹುರಾಷ್ಟ್ರ ಕಂಪನಿಗಳು ಖಾಸಗಿ ಹೂಡಿಕೆ ಮಾಡುತ್ತವೆ. ಇದರಿಂದಾಗಿ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ವಿತ್ತ ಸಚಿವಾಲಯದ ಈ ನಿರ್ಧಾರವನ್ನು ಐತಿಹಾಸಿಕ ಎಂದು ಬಣ್ಣಿಸಿದ ಮೋದಿ, ತೆರಿಗೆ ಕಡಿತ ಮಾಡಿದ್ದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ.

ಇದನ್ನೂ ಓದಿ: ಕಾರ್ಪೊರೇಟ್‌ ತೆರಿಗೆ ಕಡಿತ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 

 ಕಾರ್ಪೊರೇಟ್ ತೆರಿಗೆ ಐತಿಹಾಸಿಕ ನಡೆ. ಇದು ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವುದರ ಜತೆಗೆ  ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತದೆ. ನಮ್ಮ ಖಾಸಗಿ ವಲಯದಲ್ಲಿ  ಇದು ಸ್ಪರ್ಧೆ ಸೃಷ್ಟಿಸುತ್ತದೆ. ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿಯಾಗುವುದರಿಂದ 130 ಕೋಟಿ ಭಾರತೀಯರಿಗೆ ಇದು ವಿನ್- ವಿನ್  ಅವಕಾಶ ಎಂದು ಮೋದಿ ಟ್ವೀಟಿಸಿದ್ದಾರೆ. ಅದೇ ವೇಳೆ ಸರ್ಕಾರದ ಈ ನಿರ್ಧಾರವು ₹5 ಲಕ್ಷ ಕೋಟಿ ಡಾಲರ್ ಆರ್ಥಿಕತೆ ಸಾಧಿಸಲು ಸಹಾಯ ಮಾಡುತ್ತದೆ ಎಂದು  ಹೇಳಿದ್ದಾರೆ.

ಇದನ್ನೂ ಓದಿ: 6 ವರ್ಷಗಳಲ್ಲಿನ ಕನಿಷ್ಠ ಮಟ್ಟಕ್ಕೆ ತಲುಪಿದೆ ಆರ್ಥಿಕ ವೃದ್ಧಿ ದರ

Post Comments (+)