ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಿನ ಭೀತಿ ಹಿಂಸೆಗೆ ಕಾರಣ –ಕೇಜ್ರಿವಾಲ್

Last Updated 18 ಡಿಸೆಂಬರ್ 2019, 19:42 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ‘ವಿರೋಧ ಪಕ್ಷ’ವು ಹಿಂಸಾಚಾರವನ್ನು ಹರಡುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಮತ್ತು 2015ರ ವಿಧಾನಸಭೆ ಚುನಾವಣೆಯ ರೀತಿಯಲ್ಲಿಯೇ ಈ ಬಾರಿಯೂ ಅವರಿಗೆ ಪಾಠ ಕಲಿಸಬೇಕು ಎಂದು ಅವರು ಹೇಳಿದ್ದಾರೆ.

ಎಎಪಿ ಮತ್ತು ಅದರ ಮುಖಂಡರು ಜಾಮಿಯಾ ವಿ.ವಿ. ಮತ್ತು ಸೀಲಂಪುರ ಹಿಂಸಾಚಾರದ ಹಿಂದೆ ಇದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮತ್ತು ಶಾಸಕ ಅಮಾನತ್‌ ಉಲ್ಲಾ ಖಾನ್‌ ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಬಿಜೆಪಿ ಹೇಳುತ್ತಿದೆ.

ಮುಂದಿನ ವರ್ಷದ ಆರಂಭದಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹಾಗಾಗಿ, ಆಡಳಿತಾರೂಢ ಎಎಪಿ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ವಿವಿಧ ವಿಚಾರಗಳಲ್ಲಿ ಆಗಾಗ ವಾಕ್ಸಮರ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT