ಶುಕ್ರವಾರ, ಆಗಸ್ಟ್ 14, 2020
21 °C

ಆರ್‌ಎಸ್‌ಎಸ್‌ ವಿರುದ್ಧ ಆರೋಪ: ರಾಹುಲ್‌, ಯೆಚೂರಿಗೆ ಕೋರ್ಟ್‌ ಸಮನ್ಸ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ:  ಆರ್‌ಎಸ್‌ಎಸ್‌ ಕಾರ್ಯಕರ್ತ ವಿವೇಕ್‌ ದಾಖಲಿಸಿದ್ದ ಮಾನನಷ್ಟ ಅರ್ಜಿಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್‌ ನೀಡಿದ್ದು, ಏಪ್ರಿಲ್‌ 30ಕ್ಕೆ ಹಾಜರಾಗುವಂತೆ ಸೂಚಿಸಿದೆ.

ಗೌರಿ ಲಂಕೇಶ್‌ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಕೈವಾಡವಿದೆ ಎಂದು ರಾಹುಲ್‌ ಗಾಂಧಿ ಮತ್ತು ಸೀತಾರಾಂ ಯೆಚೂರಿ ಮಾತನಾಡಿದ್ದನ್ನು ವಿರೋಧಿಸಿ ವಿವೇಕ್‌ ಅವರು ₹1ಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್‌ ಭಾಟಿಯಾ, ಇಬ್ಬರಿಗೂ ಸಮನ್ಸ್‌ ನೀಡಿ, ಏಪ್ರಿಲ್‌ 30ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಯಾವುದೇ ಹಿಂಸಾಚಾರ ನಡೆದರೂ ಅದಕ್ಕೆ ಆರ್‌ಎಸ್‌ಎಸ್‌ ನಂಟು ಕಲ್ಪಿಸಿ ಮಾತನಾಡುವುದು ರಾಹುಲ್‌ ಗಾಂಧಿ ಮತ್ತು ಯೆಚೂರಿ ಅವರಿಗೆ ಅಭ್ಯಾಸವಾಗಿದೆ. ನಿರಾಧಾರವಾಗಿ ಎಲ್ಲವನ್ನೂ ಸಂಘಟನೆಯ ತಲೆಗೆ ಕಟ್ಟುವುದನ್ನು ತಕ್ಷಣವೇ ನಿಲ್ಲಿಸಲು ಅವರಿಗೆ ಕೋರ್ಟ್‌ ನಿರ್ದೇಶನ ನೀಡಬೇಕು’ ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು