ಗಣಿ ಆರೋಪಿ ಜನಾರ್ದನರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ ನ್ಯಾಯಾಲಯ

ಗುರುವಾರ , ಜೂನ್ 20, 2019
26 °C

ಗಣಿ ಆರೋಪಿ ಜನಾರ್ದನರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ ನ್ಯಾಯಾಲಯ

Published:
Updated:

ನವದೆಹಲಿ: ಬಹುಕೋಟಿ ವಂಚನೆ ಆರೋಪಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಜೂನ್ 8ರಿಂದ ಎರಡು ವಾರಗಳ ಕಾಲ ಭೇಟಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಅಜಯ್ ರಸ್ತೋಗಿ ಈ ಆದೇಶ ನೀಡಿದ್ದಾರೆ.
ತನ್ನ ಮಾವನವರನ್ನು ಬಳ್ಳಾರಿ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ವಿಚಾರಿಸಲು ನಾನು ಹೋಗಬೇಕಾಗಿದೆ, ಅದಕ್ಕಾಗಿ ಅನುಮತಿ ನೀಡಬೇಕು ಎಂದು ಜನಾರ್ದನ ರೆಡ್ಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ರೆಡ್ಡಿ ಪರ ವಕೀಲ ಎಸ್.ಗಣೇಶ್ ಅರ್ಜಿ ಸಲ್ಲಿಸಿದ್ದ ಮನವಿಯಲ್ಲಿ, ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಜನಾರ್ದನ ರೆಡ್ಡಿ ಅವರಿಗೆ ವಿಧಿಸಿರುವ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ನ್ಯಾಯಾಲಯ ಈ ಮನವಿಯಲ್ಲಿ ತಿರಸ್ಕರಿಸಿದೆ.
ತನಿಖಾ ತಂಡಗಳಿಗೆ ತರಾಟೆ: ₹ 35 ಸಾವಿರ ಕೋಟಿ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾಕೆ ಆರೋಪಪಟ್ಟಿ ಸಲ್ಲಿಸಿಲ್ಲ.  ಹಾಗೂ ವಿಚಾರಣೆ ಯಾಕೆ ಆರಂಭಿಸಿಲ್ಲ ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 2

  Sad
 • 1

  Frustrated
 • 1

  Angry

Comments:

0 comments

Write the first review for this !