ಸೋಮವಾರ, ಆಗಸ್ಟ್ 2, 2021
26 °C

ಕೋವಿಡ್–19 ಸೋಂಕು ಪ್ರಕರಣ ಏರಿಕೆ | ಡೆಹ್ರಾಡೂನ್‌ನಲ್ಲಿ 48 ಗಂಟೆ ಲಾಕ್‌ಡೌನ್ ಜಾರಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್: ಉತ್ತರಾಖಂಡ್‌ನಲ್ಲಿ ಕೋವಿಡ್–19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಡೆಹ್ರಾಡೂನ್‌ನಲ್ಲಿ 48 ಗಂಟೆ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ ಎಂದು ಸೂಪರಿಂಟೆಂಡೆಂಟ್ ಆಫ್‌‌ ಪೊಲೀಸ್‌ ಶ್ವೇತಾ ಚೌಬೆ ತಿಳಿಸಿದ್ದಾರೆ.

ಶುಕ್ರವಾರ ಸಂಜೆಯಿಂದಲೇ ಲಾಕ್‌ಡೌನ್‌ ಜಾರಿಗೊಳಿಸಲಾಗಿದ್ದು, ಸೋಮವಾರ ಬೆಳಗ್ಗೆ 7 ರವರೆಗೆ ಜಾರಿಯಲ್ಲಿರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ‘ಕೋವಿಡ್‌–19 ಸೋಂಕು ನಿಯಂತ್ರಣಕ್ಕಾಗಿ ಡೆಹ್ರಾಡೂನ್‌ನಲ್ಲಿ 48 ಗಂಟೆ ಕಾಲ ಲಾಕ್‌ಡೌನ್‌ ವಿಧಿಸಲಾಗಿದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 7 ರವರೆಗೆ ಇದು ಜಾರಿಯಲ್ಲಿರಲಿದೆ’ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ, ಅತ್ಯವಶ್ಯಕ ಸರಕುಗಳನ್ನು ಮಾರಾಟ ಮಾಡುವ ಅಂಗಡಿಗಳಿಗಷ್ಟೇ ಅವಕಾಶ ನೀಡಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸದ್ಯ ಉತ್ತರಾಖಂಡ್‌ನಲ್ಲಿ 2,177 ಸೋಂಕು ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 1,433 ಸೋಂಕಿತರು ಗುಣಮುಖರಾಗಿದ್ದಾರೆ. 26 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಇನ್ನೂ 718 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು