ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಒಂದೇ ದಿನ 2 ಸಾವಿರದ ಗಡಿ ದಾಟಿದ ಮೃತರ ಸಂಖ್ಯೆ

ಅಕ್ಷರ ಗಾತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19ನಿಂದ ಮೃತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,003 ಜನರು ಮೃತಪಟ್ಟಿದ್ದು, 10,974 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 3,54,065 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 11,903ಕ್ಕೆ ಏರಿಕೆಯಾಗಿದೆ.

ಸದ್ಯ 1,55,227 ಪ್ರಕರಣಗಳು ಸಕ್ರಿಯವಾಗಿದ್ದು, 1,86,935 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,13,445 ಪ್ರಕರಣಗಳು ಬೆಳಕಿಗೆ ಬಂದಿದ್ದು, 5,537 ಜನರು ಮೃತರಾಗಿದ್ದಾರೆ. 50,057 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 57,851 ಮಂದಿ ಗುಣಮುಖರಾಗಿದ್ದಾರೆ.
ಗುಜರಾತ್‌ನಲ್ಲಿ 5,962 ಸಕ್ರಿಯ ಪ್ರಕರಣಗಳಿದ್ದು, 17,082 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,533 ಜನರು ಮೃತಪಟ್ಟಿದ್ದು, ಒಟ್ಟಾರೆ 24,577 ಜನರಿಗೆ ಸೋಂಕು ತಗುಲಿದೆ.

ದೆಹಲಿಯಲ್ಲಿ 26,351 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 44,688 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 1,837 ಮಂದಿ ಈವರೆಗೆ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 48,019 ಮಂದಿಗೆ ಸೋಂಕು ತಗುಲಿದ್ದು, 20,709 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 528 ಮಂದಿ ಮೃತಪಟ್ಟಿದ್ದು, 26,782 ಗುಣಮುಖರಾಗಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 476, ಪಶ್ಚಿಮ ಬಂಗಾಳದಲ್ಲಿ 495, ಉತ್ತರ ಪ್ರದೇಶದಲ್ಲಿ 417 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT