ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಒಂದೇ ದಿನ 13,586 ಸೋಂಕು, 336 ಸಾವು

ಅಕ್ಷರ ಗಾತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 13,586 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 336 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 3,80,532 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 12,573ಕ್ಕೆ ಏರಿಕೆಯಾಗಿದೆ.

ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,20,504 ಪ್ರಕರಣಗಳು ಬೆಳಕಿಗೆ ಬಂದಿದ್ದು, 60,838 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 60,838 ಮಂದಿ ಗುಣಮುಖರಾಗಿದ್ದು, 5,751 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ 25,601 ಜನರಿಗೆ ಸೋಂಕು ತಗುಲಿದೆ. 6,191 ಸಕ್ರಿಯ ಪ್ರಕರಣಗಳಿದ್ದು, 17,819 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,591 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 49,979 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 26,669 ಸಕ್ರಿಯ ಪ್ರಕರಣಗಳಿದ್ದು, 21,341 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 1,969 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಒಟ್ಟಾರೆ 52,334 ಮಂದಿಗೆ ಸೋಂಕು ತಗುಲಿದ್ದು, 23,068 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 28,641 ಗುಣಮುಖರಾಗಿದ್ದು, 625 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 486, ಪಶ್ಚಿಮ ಬಂಗಾಳದಲ್ಲಿ 518, ಉತ್ತರ ಪ್ರದೇಶದಲ್ಲಿ 465 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT