ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 24 ಗಂಟೆಗಳಲ್ಲಿ 18,522 ಜನರಿಗೆ ಸೋಂಕು, 418 ಸಾವು

ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 18,522 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 418 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 5,66,840 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 16,893ಕ್ಕೆ ಏರಿಕೆಯಾಗಿದೆ.

ಸದ್ಯ 2,15,125 ಪ್ರಕರಣಗಳು ಸಕ್ರಿಯವಾಗಿದ್ದು, 3,34,822 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್‌-19ನಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,69,883 ಪ್ರಕರಣಗಳು ಬೆಳಕಿಗೆ ಬಂದಿದ್ದು, 73,313 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 88,960 ಮಂದಿ ಗುಣಮುಖರಾಗಿದ್ದು, 7,610 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟು31,938 ಜನರಿಗೆ ಸೋಂಕು ತಗುಲಿದೆ. 6,871 ಸಕ್ರಿಯ ಪ್ರಕರಣಗಳಿದ್ದು, 23,240 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,827 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 85,161 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 26,246 ಸಕ್ರಿಯ ಪ್ರಕರಣಗಳಿದ್ದು, 56,235 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,680 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಒಟ್ಟಾರೆ 86,224 ಮಂದಿಗೆ ಸೋಂಕು ತಗುಲಿದ್ದು, 37,334 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 47,749 ಗುಣಮುಖರಾಗಿದ್ದು, 1,141 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 564, ಪಶ್ಚಿಮ ಬಂಗಾಳದಲ್ಲಿ 653, ಉತ್ತರ ಪ್ರದೇಶದಲ್ಲಿ 672, ರಾಜಸ್ತಾನದಲ್ಲಿ 405 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT