ಮಂಗಳವಾರ, ಜೂನ್ 2, 2020
27 °C

ಕೋವಿಡ್: ದೇಶದಲ್ಲಿ 100 ದಾಟಿದ ಸಾವಿನ ಸಂಖ್ಯೆ, ಸೋಂಕು ಪ್ರಕರಣಗಳು 4067

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

covid

ನವದೆಹಲಿ: ದೇಶದಲ್ಲಿ ಕೋವಿಡ್ ರೋಗದಿಂದ ಸಾವಿಗೀಡಾದವರ ಸಂಖ್ಯೆ 100 ದಾಟಿದೆ. ಒಟ್ಟು 4067 ಸೋಂಕು ಪ್ರಕರಣಗಳು ವರದಿಯಾಗಿದ್ದು, 291 ಮಂದಿ ಗುಣಮುಖರಾಗಿದ್ದಾರೆ.

ಜಗತ್ತಿನಾದ್ಯಂತ ಕೋವಿಡ್ ರೋಗಕ್ಕೆ ಬಲಿಯಾದವರ ಸಂಖ್ಯೆ 70,000ಕ್ಕೆ ತಲುಪಿದೆ. ಸುಮಾರು 1.2 ದಶಲಕ್ಷ ಜನರಿಗೆ ಸೋಂಕು ತಗುಲಿದೆ.

ಉತ್ತರ ಪ್ರದೇಶದಲ್ಲಿ ಏಪ್ರಿಲ್ 3ರಂದು ಸಾವಿಗೀಡಾದ 55ರ ಹರೆಯದ ವ್ಯಕ್ತಿಗೆ ಕೊರೊನಾ ಸೋಂಕು ಇತ್ತು ಎಂದು ತಿಳಿದುಬಂದಿದೆ. ಇದೀಗ ಕೋವಿಡ್‌ನಿಂದಾಗಿ ಉತ್ತರ ಪ್ರದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ. ಮೃತ ವ್ಯಕ್ತಿಯ ಕುಟುಂಬದ 10 ಸದಸ್ಯರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ.

ರಾಜಸ್ಥಾನದಲ್ಲಿ 8 ಮಂದಿಗೆ ಕೋವಿಡ್  ರೋಗ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 274 ಆಗಿದೆ.  ಜುನ್‌ಜುನ್-5, ದುಂಗರ್‌ಪುರ್ -2 ಮತ್ತು ಕೋಟಾದಲ್ಲಿನ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಹೇಳಿದೆ. 

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ  52 ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು,  ಕೋವಿಡ್‌ಗೆ ಬಲಿಯಾದವರ ಸಂಖ್ಯೆ 14 ಆಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ರಾಜ್ಯದ ರಾಜಧಾನಿಯಲ್ಲಿ ಕೋವಿಡ್‌ಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು