ಗುರುವಾರ , ಜುಲೈ 29, 2021
20 °C

ಮಹಾರಾಷ್ಟ್ರ: ಕೋವಿಡ್‌ಗೆ 60 ಪೊಲೀಸರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದಲ್ಲಿ ಈವರೆಗೆ 60 ಪೊಲೀಸ್‌ ಸಿಬ್ಬಂದಿ ಕೋವಿಡ್‌ಗೆ ಮೃತಪಟ್ಟಿದ್ದು, 4,900 ಪೊಲೀಸರಲ್ಲಿ ಸೋಂಕು ಧೃಢಪಟ್ಟಿದೆ. 

ಮೃತಪಟ್ಟವರಲ್ಲಿ 38 ಮಂದಿ ಮುಂಬೈ ಪೊಲೀಸರು. ಅಲ್ಲದೆ 4,900 ಸೋಂಕಿತರಲ್ಲಿ 2,600 ಸೋಂಕಿತರು ಮುಂಬೈಗೆ ಸೇರಿದವರು ಎಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.

24 ಗಂಟೆಗಳಲ್ಲಿ 82 ಪೊಲೀಸ್‌ ಸಿಬ್ಬಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 3,700 ಪೊಲೀಸ್‌ ಅಧಿಕಾರಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಲಾಕ್‌ಡೌನ್‌ ವೇಳೆಯಲ್ಲಿ ಸರ್ಕಾರಿ ಸೇವಕರ ಕಾರ್ಯಕ್ಕೆ ತಡೆ ಒಡ್ಡಿದ್ದ ಮತ್ತು ನಿಯಮ ಉಲ್ಲಂಘನೆ ಆರೋಪದಡಿ ಮಹಾರಾಷ್ಟ್ರ ಪೊಲೀಸರು ಒಟ್ಟು 1.39 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದು, 29,425 ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು ಮಹಾರಾಷ್ಟ್ರದಲ್ಲಿ ನಿಯಮ ಉಲ್ಲಂಘನೆಯಡಿ ₹9.95 ಕೋಟಿ ದಂಡ ಸಂಗ್ರಹಿಸಲಾಗಿದೆ. 

ಈ ಸಂಧರ್ಭದಲ್ಲಿ ಪೊಲೀಸರ ಮೇಲೆ ಕನಿಷ್ಠ 290 ಹಲ್ಲೆ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 86 ಸಿಬ್ಬಂದಿ ಗಾಯಗೊಂಡಿದ್ದಾರೆ. ಅಲ್ಲದೆ 54 ಆರೋಗ್ಯ ಸಿಬ್ಬಂದಿ ಮೇಲೂ ಹಲ್ಲೆಗಳು ನಡೆದಿವೆ ಎಂದು ಅಧಿಕಾರಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು