ಗುರುವಾರ , ಏಪ್ರಿಲ್ 2, 2020
19 °C

ಕೊರೊನಾ ತಡೆಗೆ ಕ್ರಮ: ದೇಶೀಯ ವಿಮಾನ ಹಾರಾಟ ಇಂದು ಮಧ್ಯರಾತ್ರಿಯಿಂದ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ  ವೈರಸ್ ಸೋಂಕು (ಕೋವಿಡ್-19) ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲ ದೇಶೀಯ ವಾಣಿಜ್ಯ ವಿಮಾನಗಳ ಹಾರಾಟವನ್ನು ಇಂದು ಮಧ್ಯರಾತ್ರಿಯಿಂದ ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿದೆ.

‘ಇಂದು (ಮಾರ್ಚ್ 24) ರಾತ್ರಿ 12 ಗಂಟೆಯಿಂದ ದೇಶೀಯ ವಿಮಾನ ಹಾರಾಟ ನಿಷೇಧಿಸಲಾಗುತ್ತಿದೆ. ಸದ್ಯ ಕಾರ್ಯಾಚರಣೆಯಲ್ಲಿರುವ ಎಲ್ಲ ವಿಮಾನಗಳೂ ರಾತ್ರಿ 11.59ರ ಒಳಗೆ ಲ್ಯಾಂಡ್ ಆಗುವಂತೆ ವಿಮಾನಯಾನ ಸಂಸ್ಥೆಗಳು ನೋಡಿಕೊಳ್ಳಬೇಕು’ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಆದಾಗ್ಯೂ, ಸರಕುಸಾಗಣೆ ವಿಮಾನಗಳ ಹಾರಾಟಕ್ಕೆ ನಿಷೇಧ ಅನ್ವಯವಾಗುವುದಿಲ್ಲ. ನಿಷೇಧಕ್ಕೆ ಸಮಯ ಮಿತಿಯನ್ನೂ ಸಚಿವಾಲಯ ನಿಗದಿಪಡಿಸಿಲ್ಲ.

ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಸರ್ಕಾರ ಭಾನುವಾರದಿಂದಲೇ ನಿಷೇಧಿಸಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು