ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,088 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 148ಜನರು ಮೃತಪಟ್ಟಿದ್ದಾರೆ.

ಭಾರತದಲ್ಲಿ ಇಲ್ಲಿಯವರೆಗೆ1,18,447 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 48,533 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 3583ಕ್ಕೇರಿದೆ. ಈವರೆಗೂ 66,330 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆಯು54,822ಕ್ಕೆ ಏರಿಕೆಯಾಗಿದ್ದು,ಈವರೆಗೆ 1,454ಜನರು ಸಾವಿಗೀಡಾಗಿದ್ದಾರೆ. 11,726 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41,642 ಸಕ್ರಿಯ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 20,343 ಪ್ರಕರಣಗಳು ಪತ್ತೆಯಾಗಿದ್ದು, 6,282 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 94 ಮಂದಿ ಸಾವಿಗೀಡಾಗಿದ್ದಾರೆ.

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19,166ಕ್ಕೆ ಏರಿದ್ದು, ಈವರೆಗೆ 773 ಮಂದಿ ಸಾವಿಗೀಡಾಗಿದ್ದಾರೆ. 5,488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದೆಹಲಿಯಲ್ಲಿ ಈವರೆಗೆ ಒಟ್ಟು 17,420 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 194 ಮಂದಿ ಮೃತಪಟ್ಟಿದ್ದರೆ, 5,567ಮಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.