ಭಾನುವಾರ, ಜೂನ್ 7, 2020
22 °C

Covid-19 India Update | ಕಳೆದ 24ಗಂಟೆಯಲ್ಲಿ 5,609 ಹೊಸ ಪ್ರಕರಣ, 132 ಜನ ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 5,609 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 132 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಟಿಸಿದೆ.

ಇದರೊಂದಿಗೆ ದೇಶದ್ಲಲಿ ಸೋಕಿತರ ಸಂಖ್ಯೆ, 1,12,359ಕ್ಕೆ ಏರಿಕೆಯಾಗಿದೆ. ಈ ಪೈಕಿ 45,299 ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 3,435 ಸೋಂಕಿತರು ಮೃತಪಟ್ಟಿದ್ದಾರೆ. 63,624 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ 39,297ಕ್ಕೆ ಏರಿಕೆಯಾಗಿದ್ದು, ಈವರೆಗೆ 1,390 ಜನರು ಸಾವಿಗೀಡಾಗಿದ್ದಾರೆ. 10,318 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 13,191 ಪ್ರಕರಣಗಳು ಪತ್ತೆಯಾಗಿದ್ದು, 5,882 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 87 ಮಂದಿ ಸಾವಿಗೀಡಾಗಿದ್ದಾರೆ.

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,537ಕ್ಕೆ ಏರಿದ್ದು, ಈವರೆಗೆ 749 ಮಂದಿ ಸಾವಿಗೀಡಾಗಿದ್ದಾರೆ. 5,219 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೆಹಲಿಯಲ್ಲಿ ಈವರೆಗೆ ಒಟ್ಟು 11,088 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, 176 ಮಂದಿ ಮೃತಪಟ್ಟಿದ್ದಾರೆ. 5,192 ಮಂದಿ ಗುಣಮುಖರಾಗಿದ್ದಾರೆ.

ಕರ್ನಾಟದಲ್ಲಿ ಬುಧವಾರ ಸಂಜೆ 5ರ ವರೆಗೆ ಸೋಂಕಿತರ ಸಂಖ್ಯೆ1,462ಕ್ಕೆ ಏರಿಕೆಯಾಗಿದೆ. ಇದರಲ್ಲಿ 41 ಜನರು ಮೃತಪಟ್ಟಿದ್ದರೆ, 556 ಮಂದಿ ಗುಣಮುಖರಾಗಿದ್ದಾರೆ. 864 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು