ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ಒಂದೇ ದಿನದಲ್ಲಿ 1486 ಹೊಸ ಕೊರೊನಾ ಪ್ರಕರಣ, 49 ಸಾವು

Last Updated 22 ಏಪ್ರಿಲ್ 2020, 13:17 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,486 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 49 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 20,471ಕ್ಕೆ ಏರಿಕೆಯಾಗಿದೆ. ಈವರೆಗೆ 652 ಜನ ಸೋಂಕಿನಿಂದಾಗಿ ಸಾವಿಗೀಡಾಗಿದ್ದು, 3,959 ಮಂದಿ ಗುಣಮುಖರಾಗಿದ್ದಾರೆ. 15,859 ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 5, 221ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟು 251 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ದೆಹಲಿಯಲ್ಲಿ ಒಟ್ಟು 2,156 ಪ್ರಕರಣಗಳು, 47 ಮಂದಿ ಸಾವು; ತಮಿಳುನಾಡಿನಲ್ಲಿ 1,596 ಪ್ರಕರಣಗಳು,18 ಮಂದಿ ಸಾವು; ರಾಜಸ್ಥಾನದಲ್ಲಿ 1,801 ಪ್ರಕರಣಗಳು ಈವರೆಗೆ ವರದಿಯಾಗಿದ್ದು, 25 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಒಂದು ದಿನದಲ್ಲಿ 7 ಮಂದಿಯಲ್ಲಿ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡಿದೆ. ಈವರೆಗೆ ಒಟ್ಟು 427 ಮಂದಿಗೆ ಸೋಂಕು ತಗುಲಿದೆ. ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, 131 ಜನರು ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT