ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್ ಉದ್ಯೋಗಿಯಲ್ಲಿ ಕೊರೊನಾ ಸೋಂಕು ದೃಢ

Last Updated 28 ಏಪ್ರಿಲ್ 2020, 1:11 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ನ ಒಬ್ಬರು ಉದ್ಯೋಗಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸರ್ವೋಚ್ಚ ನ್ಯಾಯಾಲಯದ ಉದ್ಯೋಗಿಯೊಬ್ಬರಿಗೆ ಕೊರೊನಾ ತಗುಲಿದ ಮೊದಲ ಪ್ರಕರಣ ಇದು.

ಸೋಂಕಿತ ವ್ಯಕ್ತಿಯು ಏಪ್ರಿಲ್ 16ರಂದು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇದಾದ ಎರಡು ದಿನಗಳ ಬಳಿಕ ಜ್ವರದಿಂದ ಬಳಲಿದ್ದರು. ಅವರಿಗೆ ಕೊರೊನಾ ತಗುಲಿರುವುದು ಸೋಮವಾರ ದೃಢಪಟ್ಟಿದೆ. ಇವರು ಇಬ್ಬರು ರಿಜಿಸ್ಟ್ರಾರ್‌ಗಳ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ ಅವರಿಬ್ಬರನ್ನು ಸ್ವಯಂ ಕ್ವಾರಂಟೈನ್‌ಗೆ ಒಳಗಾಗುವಂತೆ ಸೂಚಿಸಲಾಗಿದೆ.

ಸೋಂಕಿತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸುಪ್ರೀಂ ಕೋರ್ಟ್‌ ಕಾರ್ಯಕಲಾಪಗಳಿಗೆ ಮಾರ್ಚ್ 23ರಿಂದ ನಿರ್ಬಂಧ ವಿಧಿಸಲಾಗಿದೆ. ತೀರಾ ತುರ್ತು ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT