ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕರಣಗಳ ತುರ್ತು ವಿಚಾರಣೆ ಮಾತ್ರ ಕೈಗೆತ್ತಿಕೊಳ್ಳಲಿದೆ ಸುಪ್ರೀಂ ಕೋರ್ಟ್

Last Updated 23 ಮಾರ್ಚ್ 2020, 8:07 IST
ಅಕ್ಷರ ಗಾತ್ರ

ನವದೆಹಲಿ:ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್ ಮಾಡಿರುವ ಕಾರಣ ತುರ್ತು ವಿಚಾರಣೆ ನಡೆಯಬೇಕಾಗಿರುವ ಪ್ರಕರಣಗಳನ್ನು ಮಾತ್ರ ಸುಪ್ರೀಂ ಕೋರ್ಟ್ ಸ್ವೀಕರಿಸಲಿದೆ. ಇದಕ್ಕಾಗಿ ಒಂದೇ ಒಂದು ನ್ಯಾಯಪೀಠ ಮಾತ್ರ ಲಭ್ಯವಿದೆ. ನ್ಯಾಯಾಂಗ ಕಾರ್ಯಗಳಿಗಾಗಿ ಇದು ಬುಧವಾರ ಮಾತ್ರ ಕಾರ್ಯವೆಸಗಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬಡೆಈ ನಿರ್ಧಾರ ಪ್ರಕಟಿಸಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳ ನ್ಯಾಯಪೀಠವು ತುರ್ತು ವಿಚಾರಣೆ ನಡೆಯಬೇಕಾಗಿರುವ ಪ್ರಕರಣಗಳನ್ನು ಮಾತ್ರ ಕೈಗೆತ್ತಿಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವ ಸೌಕರ್ಯವಿದೆ. ಸುಪ್ರೀಂಕೋರ್ಟ್‌ನ ಆವರಣದಲ್ಲಿಯೇ ಇದಕ್ಕೆ ಸೌಕರ್ಯ ಕಲ್ಪಿಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT