ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ| ಫಿಲಿಪೀನ್ಸ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಕರೆತರಲು ಕೇಂದ್ರ ಯತ್ನ

Last Updated 20 ಮಾರ್ಚ್ 2020, 7:42 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಫಿಲಿಪೀನ್ಸ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ತವರಿಗೆ ಕರೆತರುವ ಯತ್ನ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಬಗ್ಗೆ ತಿಳಿಸಿರುವ ಕೇಂದ್ರ ಸಚಿವ ಜಿ. ಕೃಷ್ಣ ರೆಡ್ಡಿ ‘ಫಿಲಿಪೀನ್ಸ್‌ನಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ತವರಿಗೆ ಮರಳಿ ಕರೆತರುವ ಬಗ್ಗೆ ಕೇಂದ್ರ ಸರ್ಕಾರವು ಶುಕ್ರವಾರ ಚರ್ಚೆ ನಡೆಸಲಿದೆ. ಭಾರತದಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವಿದೇಶಿ ವಿಮಾನಗಳಿಗೆ ನಿರ್ಬಂಧ ಹೇರಲಾಗಿದೆ. ಆ ಕಾರಣ, ಫಿಲಿಪೀನ್ಸ್‌ನಲ್ಲಿ ಉಳಿದಿರುವ ಭಾರತ ಮೂಲಕ ವಿದ್ಯಾರ್ಥಿಗಳು ತವರಿಗೆ ವಾಪಸ್ಸಾಗಲು ಸಾಧ್ಯವಾಗುತ್ತಿಲ್ಲ‘ ಎಂದು ಹೇಳಿದ್ದಾರೆ.

ಪೋಷಕರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರವು ಅಲ್ಲಿನ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ. ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ.

‘ತೆಲುಗು ಭಾಷಿಗರು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಿಲಿಪೀನ್ಸ್‌ನಲ್ಲಿ ಇದ್ದಾರೆ. ನಾವು ಆರೋಗ್ಯ ಸಚಿವಾಲಯದೊಂದಿಗೆ ಮಾತನಾಡಿದ್ದೇವೆ. ಅಲ್ಲಿ ಉಳಿದಿರುವ ವಿದ್ಯಾರ್ಥಿಗಳ ತಪಾಸಣೆ ಮತ್ತು ವಾಪಸ್ಸಾತಿಯ ಬಗ್ಗೆ ಇಂದು ನಿರ್ಧಾರ ಕೈಗೊಳ್ಳಲಾಗುವುದು‘ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT