ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19| ವ್ಯಕ್ತಿಗಳ ಗುರುತಿಸಲು ಎಡಗೈ ಮೇಲೆ ಮುದ್ರೆ: ಮಹಾರಾಷ್ಟ್ರ ಸರ್ಕಾರ

Last Updated 17 ಮಾರ್ಚ್ 2020, 5:02 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌–19 ಹಿನ್ನೆಲೆಯಲ್ಲಿ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿರುವ ವ್ಯಕ್ತಿಗಳ ಎಡಗೈ ಮೇಲೆ ಮುದ್ರೆ ಒತ್ತಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಆ ಮೂಲಕ ವ್ಯಕ್ತಿಗಳನ್ನು ಸುಲಭವಾಗಿ ಗುರುತಿಸಲು ಸಹಾಯವಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಕೋವಿಡ್‌–19 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಹೆಚ್ಚು ಕಂಡುಬಂದಿರುವ ಹಿನ್ನೆಲೆಯಲ್ಲಿ ಉದ್ದವ್‌ ಠಾಕ್ರೆ ನೇತೃತ್ವದ ಸರ್ಕಾರ ಈ ಕ್ರಮ ಕೈಗೊಳ್ಳಲು ಮುಂದಾಗಿದೆ.

ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿರುವವರ ಎಡಗೈ ಮೇಲೆ ಮುದ್ರೆ ಹಾಕಲಾಗುವುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ 39 ಕೋವಿಡ್‌–19 ಪ್ರಕರಣಗಳು ಪತ್ತೆಯಾದ ನಂತರ ತೀವ್ರ ನಿಗಾ ವಹಿಸಲಾಗಿದೆ.

ಕಳೆದ ಕೆಲ ದಿನಗಳಲ್ಲಿ ಸುಮಾರು ಏಳು ಶಂಕಿತ ಕೊರೊನಾ ಸೋಂಕು ಶಂಕಿತರು ಚಿಕಿತ್ಸಾ ಕೇಂದ್ರಗಳಿಂದ ತಪ್ಪಿಸಿಕೊಂಡಿದ್ದು ಮಹಾರಾಷ್ಟ್ರ ಸರ್ಕಾರದ ತಲೆನೋವಿಗೆ ಕಾರಣವಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT