ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ಮಾ.31ರವರೆಗೆ ಎಲ್ಲಾ ಶಿಕ್ಷಣ ಸಂಸ್ಥೆ ಮುಚ್ಚಲು ತೆಲಂಗಾಣ ಸಿಎಂ ಆದೇಶ

Last Updated 15 ಮಾರ್ಚ್ 2020, 6:06 IST
ಅಕ್ಷರ ಗಾತ್ರ

ಹೈದರಾಬಾದ್:ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಮಾರ್ಚ್ 31ರವರೆಗೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಹೇಳಿದ್ದಾರೆ.

‘ತೆಲಂಗಾಣದಲ್ಲಿ ಸಾರ್ವಜನಿಕರು ಭಯಭೀತರಾಗಬಾರದು. ಈ ಮೊದಲು ಕೋವಿಡ್‌–19 ಪತ್ತೆಯಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಗುಣಮುಖರಾಗಿದ್ದಾರೆ. ಈಗ ಎರಡನೇ ಪ್ರಕರಣ ವರದಿಯಾಗಿದೆ. ಆ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ಸೋಂಕು ಜನರಿಗೆ ಸುಲಭವಾಗಿ ಹರಡಬಹುದು. ಆ ಕಾರಣ ಜನರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವುದನ್ನು ಕಡಿಮೆ ಮಾಡಬೇಕು’ ಎಂದು ರಾವ್ ತಿಳಿಸಿದ್ದಾರೆ.

ಕೋವಿಡ್‌–19 ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದ ಅವರು, ‘ತೆಲಂಗಾಣದಲ್ಲಿ 1,020 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ಗಳು ಸಿದ್ಧವಾಗಿವೆ. ಪ್ರಕರಣಗಳ ಮೇಲ್ವಿಚಾರಣೆಗಾಗಿ ಕಾರ್ಯಪಡೆಯನ್ನು ರಚಿಸಲಾಗಿದೆ. ಕೋಚಿಂಗ್ ಕೇಂದ್ರಗಳು ಸೇರಿದಂತೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮಾರ್ಚ್ 31ರವರೆಗೆ ಮುಚ್ಚಲಾಗುವುದು’ ಎಂದು ರಾವ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT