ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂಗೂ ತಟ್ಟಿದ ಕೋವಿಡ್‌ ಬಿಸಿ: ವರ್ಚುವಲ್‌ ಕೋರ್ಟ್‌ ಆರಂಭಕ್ಕೆ ಚಿಂತನೆ

Last Updated 16 ಮಾರ್ಚ್ 2020, 7:16 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಹಿನ್ನೆಲೆಯಲ್ಲಿ ನ್ಯಾಯಾಲಯಗಳನ್ನು ಸಂಪೂರ್ಣ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಸಿಜೆಐ ಎಸ್.ಎ. ಬೊಬ್ಡೆ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು, ನ್ಯಾಯವಾದಿಗಳ ಮುಖಂಡರು ಮತ್ತು ಹಿರಿಯ ವೈದ್ಯರೊಂದಿಗೆ ಸಭೆ ನಡೆಸಿರುವ ಸಿಜೆಐ ಬೊಬ್ಡೆ ಅವರು ನ್ಯಾಯಾಲಯಗಳನ್ನು ಸಂಪೂರ್ಣ ಸ್ಥಗಿತಗೊಳಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ್ದಾರೆ.

ವರ್ಚುವಲ್‌ ಕೋರ್ಟ್‌ (ಪ್ರಕರಣದ ವಿಚಾರಣೆ, ತೀರ್ಪುಗಳನ್ನು ಆನ್‌ಲೈನ್‌ ಮೂಲಕ ನೀಡುವ ನ್ಯಾಯಾಲಯ) ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರಮುಖ ಪ‍್ರಕರಣಗಳ ವಿಚಾರಣೆಯನ್ನು ಅಲ್ಲಿಯೇ ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಯು.ಯು.ಲಲಿತ್, ಡಿ.ವೈ.ಚಂದ್ರಚೂಡ್ ಮತ್ತು ಎಲ್.ನಾಗೇಶ್ವರ ರಾವ್ ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT