ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

COVID-19 UPDATES| ದೇಶದಲ್ಲಿ 1024ಕ್ಕೆ ಏರಿದ ಕೊರೊನಾ ಪ್ರಕರಣ, 29 ಜನರ ದುರ್ಮರಣ

Last Updated 30 ಮಾರ್ಚ್ 2020, 7:24 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ 1024ಕ್ಕೆ ಏರಿದೆ. ಕೊರೊನಾ ವೈರಸ್‌ ಸೋಂಕಿನಿಂದ ಈವರೆಗೆ 30 ಜನರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ 12 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಆ ಮೂಲಕ ಮಹಾರಾಷ್ಟ್ರ ಒಂದರಲ್ಲೇ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ 225ಕ್ಕೆ ತಲುಪಿದೆ.

ಕರ್ನಾಟಕದಲ್ಲಿ 83, ಕೇರಳದಲ್ಲಿ 202, ಉತ್ತರ ಪ್ರದೇಶದಲ್ಲಿ 75, ರಾಜಸ್ಥಾನದಲ್ಲಿ 57, ದೆಹಲಿಯಲ್ಲಿ 72 ತೆಲಂಗಾಣದಲ್ಲಿ 65 ಪ್ರಕರಣಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೊಂದಿರುವ ವ್ಯಕ್ತಿಗಳು ಪತ್ತೆಯಾಗಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 200ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 722,350 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 33,980ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT