ಶನಿವಾರ, ಮೇ 30, 2020
27 °C

ಕೋವಿಡ್‌-19| ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 83, ರಾಜ್ಯದಲ್ಲಿ ನಾಲ್ಕನೇ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಶುಕ್ರವಾರ 83ಕ್ಕೆ ಏರಿದೆ. 

ಒಂದೇ ದಿನದಲ್ಲಿ 478 ಕೋವಿಡ್-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಕೊರೊನಾ ಸೋಂಕು ಹೊಂದಿದವರ ಸಂಖ್ಯೆ 3000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ. 

ಕೋವಿಡ್‌-19 ಪತ್ತೆಯಾದವರಲ್ಲಿ 162 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ 26 ಜನರು ಸಾವಿಗೀಡಾಗಿದ್ದಾರೆ. ಗುಜರಾತ್‌ನಲ್ಲಿ 8, ತೆಲಂಗಾಣದಲ್ಲಿ 7, ಮಧ್ಯಪ್ರದೇಶದಲ್ಲಿ 6, ಕರ್ನಾಟಕದಲ್ಲಿ 4 ಜನ ಸೇರಿದಂತೆ ದೇಶದಲ್ಲಿ ಒಟ್ಟು 83 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 

ಇದೇ ವೇಳೆ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 10, 98, 386ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 59,159ಕ್ಕೆ ಏರಿದೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು