ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಕೊರೊನಾ ಸೋಂಕಿತರ ಸಂಖ್ಯೆ 85,940ಕ್ಕೆ ಏರಿಕೆ

Last Updated 16 ಮೇ 2020, 15:21 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೆ 85,940 ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಚೀನಾವನ್ನು ಸಹ ಮೀರಿಸಿದೆ.

ಈವರೆಗೆ ಭಾರತದಲ್ಲಿ 30152 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಾವಿನ ಸಂಖ್ಯೆ 2752ಕ್ಕೇರಿದೆ. 53,035 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ 29,100 ಪ್ರಕರಣಗಳು ಬೆಳಕಿಗೆ ಬಂದಿದ್ದು, ಈವರೆಗೆ 1,068 ಜನರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಲ್ಲಿ 10,108 ಪ್ರಕರಣಗಳು ಪತ್ತೆಯಾಗಿದ್ದು, 2599 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 71 ಮಂದಿ ಸಾವಿಗೀಡಾಗಿದ್ದಾರೆ.

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9931ಕ್ಕೆ ಏರಿದ್ದು, ಈವರೆಗೆ 606 ಮಂದಿ ಸಾವಿಗೀಡಾಗಿದ್ದಾರೆ. 4035 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ದೆಹಲಿಯಲ್ಲಿ ಈವರೆಗೆ ಒಟ್ಟು 8895 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, 123 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT