ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ನೌಕರರ ತುಟ್ಟಿಭತ್ಯೆ ಹೆಚ್ಚಳ ತಡೆಹಿಡಿಯಲು ದೆಹಲಿ ಸರ್ಕಾರ ತೀರ್ಮಾನ

Last Updated 30 ಏಪ್ರಿಲ್ 2020, 3:46 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌-19 ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ತೊಂದರೆಯನ್ನು ಸರಿದೂಗಿಸಲು ಮುಂದಾಗಿರುವ ದೆಹಲಿ ಸರ್ಕಾರ 2021ರ ಜುಲೈ 30ರವೆಗೂ ನೌಕರರತುಟ್ಟಿಭತ್ಯೆ(ಡಿಎ) ಹೆಚ್ಚಳ ತಡೆಹಿಡಿಯಲು ನಿರ್ಧರಿಸಿದೆ.

ಈ ನಿರ್ಧಾರದ ಮೂಲಕ ಕೇಂದ್ರ ಸರ್ಕಾರದ ನಡೆಯನ್ನೇ ದೆಹಲಿ ಸರ್ಕಾರ ಅನುಸರಿಸಲು ಮುಂದಾಗಿದೆ.

ದೆಹಲಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸುಮಾರು 2.2 ಲಕ್ಷ ನೌಕರರು ಮತ್ತು ಪಿಂಚಣಿದಾರರಿಗೆ ಇದು ಅನ್ವಯವಾಗಲಿದೆ.

ಜುಲೈ 2021 ರವರೆಗೆ ತುಟ್ಟಿಭತ್ಯೆ ಹೆಚ್ಚಳವನ್ನು ತಡೆಹಿಡಿಯುವಕೇಂದ್ರ ಸರ್ಕಾರದ ಆದೇಶವನ್ನು ಅನುಮೋದಿಸಿ ದೆಹಲಿ ಹಣಕಾಸು ಇಲಾಖೆ ಆದೇಶ ಹೊರಡಿಸಿದೆ.

'ತುಟ್ಟಿಭತ್ಯೆ ವಿಚಾರದಲ್ಲಿ ಕೇಂದ್ರದ ಆದೇಶವನ್ನು ದೆಹಲಿ ಸರ್ಕಾರವು ಅನುಮೋದಿಸಿದೆ. ಇದು ದೆಹಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೂ ಅನ್ವಯಿಸುತ್ತದೆ' ಎಂದು ದೆಹಲಿ ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.

ಇದರಿಂದ ಉಳಿಸಿದ ಹಣವನ್ನು ಕೋವಿಡ್‌-19 ಬಿಕ್ಕಟ್ಟು ಎದುರಿಸಲು ಬಳಸಲಾಗುವುದು ಎಂದು ದೆಹಲಿ ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT