ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರಿಂದ ಇಂದು 4ನೇ ಸುತ್ತಿನ ಸುದ್ದಿಗೋಷ್ಠಿ

Last Updated 16 ಮೇ 2020, 5:49 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಶನಿವಾರ) ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ₹20 ಲಕ್ಷ ಕೋಟಿ ಪ್ಯಾಕೇಜ್‌ ಘೋಷಣೆ ಮಾಡಿದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕರೆದ ನಾಲ್ಕನೇ ಸುದ್ದಿಗೋಷ್ಠಿ ಇದಾಗಿದೆ.

ಕೊರೊನಾ ಪಿಡುಗಿನಿಂದ ತತ್ತರಿಸಿರುವ ದೇಶಕ್ಕೆ ಕೇಂದ್ರವು ನೀಡಲು ಉದ್ದೇಶಿಸಿರುವ ಪರಿಹಾರ ಕ್ರಮಗಳ ಮೂರನೇ ಕಂತಿನ ವಿವರಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದರು.

ಕೃಷಿ ಮತ್ತು ಸಂಬಂಧಿಸಿದ ಕ್ಷೇತ್ರಗಳಿಗೆ ಒಟ್ಟು ಎಂಟು ಉಪಕ್ರಮಗಳನ್ನು ನಿರ್ಮಲಾ ಪ್ರಕಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT