ಶನಿವಾರ, ಜೂನ್ 6, 2020
27 °C

ಕಳೆದ 24 ಗಂಟೆಗಳಲ್ಲಿ 21 ಬಿಎಸ್‌ಎಫ್‌ ಸಿಬ್ಬಂದಿಗೆ ಕೊರೊನಾ ಸೋಂಕು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) 21 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಬಿಎಸ್‌ಎಫ್‌ ತಿಳಿಸಿದೆ. 

ಕೊರೊನಾ ಸೋಂಕು ಪತ್ತೆಯಾಗಿರುವ ನೌಕರರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇಲ್ಲಿಯವರೆಗೂ ಕೊರೊನಾ ಸೋಂಕು ಪತ್ತೆಯಾಗಿದ್ದ ಒಟ್ಟು ಸಿಬ್ಬಂದಿಯಲ್ಲಿ 286 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 

ಈಗ ಗಡಿ ಭದ್ರತಾ ಪಡೆಗೆ ಸಂಬಂಧಿಸಿದ 120 ಕೊರೊನಾ ಪ್ರಕರಣಗಳು ಕ್ರಿಯಾಶೀಲವಾಗಿವೆ ಎಂದು ಬಿಎಸ್‌ಎಫ್‌ ಸ್ಪಷ್ಟಪಡಿಸಿದೆ.  
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು