ಶನಿವಾರ, ಜುಲೈ 24, 2021
27 °C

19ರಿಂದ ಚೆನ್ನೈ ನಗರ ಸಂಪೂರ್ಣ ಲಾಕ್‌ಡೌನ್‌: ತಮಿಳುನಾಡು ಸಿಎಂ ಪಳನಿ ಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಚೆನ್ನೈ ನಗರ ಹಾಗೂ ಹೊರವಲಯ ಪ್ರದೇಶಗಳಲ್ಲಿ ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ಪ್ರದೇಶಗಳನ್ನು ಸಂಪೂರ್ಣ ಲಾಕ್‌ಡೌನ್‌ ‌ ಮಾಡುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸೋಮವಾರ ಘೋಷಿಸಿದ್ದಾರೆ. 

ಚೆಂಗಲ್‌ಪೇಟೆ, ಕಾಂಚೀಪುರಂ, ತಿರುವಲ್ಲೂರು ಜಿಲ್ಲೆಗಳ ಭಾಗದಲ್ಲಿ ‍ಕೊರೊನಾ ಸೋಂಕು ಹೆಚ್ಚುತ್ತಿದೆ. ಹಾಗಾಗಿ ಜೂನ್‌ 19ರಿಂದ 30ರವರೆಗೆ ಕಟ್ಟುನಿಟ್ಟಿನ ಲಾಕ್‌ಡೌನ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಭೆಯಲ್ಲಿ ಅವರು ತಿಳಿಸಿದರು. 

12 ದಿನಗಳ ಅವಧಿಯಲ್ಲಿ ಎರಡು ಭಾನುವಾರ ಪೂರ್ಣ ಪ್ರಮಾಣದ ಲಾಕ್‌ಡೌನ್‌ ಅನುಷ್ಠಾನಗೊಳಿಸಲಾಗುವುದು. ಪಡಿತರ ಕಾರ್ಡ್‌ ಹೊಂದಿರುವವರು ಮತ್ತು ಅಸಂಘಟಿತ ವಲಯ ಕಾರ್ಮಿಕರಿಗೆ  ಒಂದು ಸಾವಿರ ಪರಿಹಾರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು