ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ: ನಾಲ್ಕು ಲಕ್ಷದತ್ತ ಕೋವಿಡ್‌-19 ಪ್ರಕರಣ

Last Updated 20 ಜೂನ್ 2020, 20:39 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಶನಿವಾರ 14,515 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, ಇದು ಇಲ್ಲಿಯವರೆಗೂ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,95,047ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಶನಿವಾರ 375 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಕಳೆದ 9 ದಿನದಿಂದ ಸತತವಾಗಿ ಪ್ರತಿನಿತ್ಯ 10 ಸಾವಿರಕ್ಕೂ ಅಧಿಕ ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ.

ನಾಲ್ಕನೇ ಸ್ಥಾನದಲ್ಲಿ ಭಾರತ

ವಿಶ್ವದಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪೈಕಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅಮೆರಿಕ, ಬ್ರೆಜಿಲ್‌, ರಷ್ಯಾದಲ್ಲಿ ಭಾರತಕ್ಕಿಂತ ಹೆಚ್ಚಿನ ಪ್ರಕರಣ ದಾಖಲಾಗಿವೆ.

ರಾಜ್ಯದಲ್ಲಿ 416 ಮಂದಿಗೆ ಸೋಂಕು

ಶನಿವಾರ ಒಂದೇ ದಿನ ರಾಜ್ಯದಲ್ಲಿ 416 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕೋವಿಡ್ ಪೀಡಿತರ ಸಂಖ್ಯೆ 8,697ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT