ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂದೇ ಭಾರತ್‌ ಮಿಷನ್‌: ಮತ್ತೆ 1 ಲಕ್ಷ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ

Last Updated 29 ಮೇ 2020, 2:10 IST
ಅಕ್ಷರ ಗಾತ್ರ

ನವದೆಹಲಿ: ಈವರೆಗೂ 45,000ಕ್ಕೂ ಹೆಚ್ಚು ಭಾರತೀಯರು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶದಿಂದ ಮರಳಿದ್ದು, ಜೂನ್ 13 ರವರೆಗೆ 1,00,000 ಜನರನ್ನು ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.

ಲ್ಯಾಟಿನ್ ಅಮೆರಿಕ, ಕೆರಿಬಿಯನ್, ಆಫ್ರಿಕಾ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಉಳಿದುಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

'ಭಾರತಕ್ಕೆ ಹಾರಾಟ ನಡೆಸುತ್ತಿರುವ ವಿದೇಶಿ ವಿಮಾನಗಳ ಸಹಾಯ ಪಡೆದುಕೊಳ್ಳುವ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತಿದೆ' ಎಂದು ಅವರು ಆನ್‌ಲೈನ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನದವರೆಗೆ ಒಟ್ಟು 45,216 ಭಾರತೀಯರನ್ನು ಮರಳಿ ಕರೆತರಲಾಯಿತು. ಅವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಮತ್ತು 5,107 ವೃತ್ತಿಪರರು ಸೇರಿದ್ದಾರೆ ಎಂದು ಶ್ರೀವಾಸ್ತವ ಹೇಳಿದ್ದಾರೆ.

ಸುಮಾರು 5,000 ಭಾರತೀಯರು ನೇಪಾಳ ಮತ್ತು ಬಾಂಗ್ಲಾದೇಶದಿಂದ ಭೂ ಗಡಿಯ ಮೂಲಕ ಮರಳಿದ್ದಾರೆ ಎಂದು ಅವರು ದೃಢಪಡಿಸಿದ್ದಾರೆ.

ಮೇ 7ರಂದು ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆಯ ಮೊದಲ ಹಂತವನ್ನು ಆರಂಭಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT