ಮಂಗಳವಾರ, ಜುಲೈ 27, 2021
24 °C

ಕೋವಿಡ್‌: ಸ್ವಯಂ ನಿರ್ಬಂಧಕ್ಕೆ ಒಳಗಾದ ಉತ್ತರಾಖಂಡ ಮುಖ್ಯಮಂತ್ರಿ, ಮೂವರು ಸಚಿವರು

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್(ಉತ್ತರಾಖಂಡ): ಕೊರೊನಾ ಸೋಂಕಿತ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರೊಂದಿಗಿನ ಭೇಟಿಯ ನಂತರ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಮೂವರು ಸಚಿವರು ಸೋಮವಾರ ಸ್ವಯಂ ನಿರ್ಬಂಧಕ್ಕೆ (ಸೆಲ್ಫ್‌ ಕ್ವಾರಂಟೈನ್‌) ಒಳಗಾಗಿದ್ದಾರೆ.   

ಸತ್ಪಾಲ್ ಮಹಾರಾಜ್, ಅವರ ಪತ್ನಿ ಮತ್ತು ಇತರ 21 ಕುಟುಂಬ ಸದಸ್ಯರು, ಸಿಬ್ಬಂದಿ ಮತ್ತು ಅವರ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶುಕ್ರವಾರ ಸತ್ಪಾಲ್ ಮಹಾರಾಜ್ ಅವರು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದು ಆತಂಕ ಸೃಷ್ಟಿಸಿದೆ.

ಶುಕ್ರವಾರದ ಸಭೆಯಲ್ಲಿ ಪಾಲ್ಗೊಂಡಿದ್ದ ಉತ್ತರಖಂಡನ ಉಳಿದ ಸಚಿವರು ಮತ್ತು ಅಧಿಕಾರಿಗಳಿಗೆ ಕ್ವಾರೆಂಟೈನ್‌ ಅಗತ್ಯವಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ. 

'ಸಚಿವರು ಮತ್ತು ಅಧಿಕಾರಿಗಳು ಸತ್ಪಾಲ್ ಮಹಾರಾಜ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರದ ಕಾರಣ ಕಡಿಮೆ ಅಪಾಯವಿದೆ. ಅವರು ಸಾಮಾನ್ಯ ರೀತಿಯಲ್ಲಿ ಕಾರ್ಯನಿರ್ವಹಿಸಬಹುದು ಮತ್ತು ಅವರನ್ನು ನಿರ್ಬಂಧಿಸುವ ಅಗತ್ಯವಿಲ್ಲ' ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಅಮಿತ್ ನೇಗಿ ತಿಳಿಸಿದ್ದಾರೆ.

ಆದರೆ, ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮತ್ತು ಇತರ ಮೂವರು ಮಂತ್ರಿಗಳಾದ ಹರಕ್ ಸಿಂಗ್ ರಾವತ್, ಮದನ್ ಕೌಶಿಕ್ ಮತ್ತು ಸುಬೋಧ್ ಯುನಿಯಲ್ ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ನಿರ್ಬಂಧಕ್ಕೆ ಒಳಗಾಗಲು ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು