ಮಂಗಳವಾರ, ಆಗಸ್ಟ್ 9, 2022
20 °C

ಕೋವಿಡ್‌-19 ಹಿನ್ನೆಲೆ: 80 ದಿನಗಳ ನಂತರ ತಿರುಮಲ ದೇಗುಲಕ್ಕೆ ಭಕ್ತರ ಪ್ರವೇಶ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ತಿರುಪತಿ: ಕೋವಿಡ್‌-19 ಹಿನ್ನೆಲೆಯಲ್ಲಿ ಸುಮಾರು 80 ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ತಿರುಮಲ ವೆಂಕಟೇಶ್ವರ ದೇವಸ್ಥಾನದ ಬಾಗಿಲುಗಳನ್ನು ತೆರೆಯಲಾಗಿದ್ದು ಸಾಮಾನ್ಯ ಭಕ್ತರ ದರ್ಶನಕ್ಕೆ ಗುರುವಾರ ಅವಕಾಶ ಕಲ್ಪಿಸಲಾಗಿದೆ. 

ದರ್ಶನಕ್ಕೆ ತೆರಳಿದ್ದ ಭಕ್ತರು ಮಾಸ್ಕ್‌ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ಒಳಗೊಂಡಂತೆ ಮುಂತಾದ ಕಟ್ಟುನಿಟ್ಟಿನ ಕ್ರಮಗಳನ್ನು ದೇವಸ್ಥಾನದ ಅಧಿಕಾರಿಗಳು ಕೈಗೊಂಡಿದ್ದಾರೆ.

ಭಕ್ತರನ್ನು ನಿಯಂತ್ರಿಸಲು ಮತ್ತು ಜನದಟ್ಟಣೆ ತಡೆಗಟ್ಟಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಾಡಿಕೊಂಡಿದೆ.

ಜೂನ್ 8 ರಂದು ದೇವಾಲಯವನ್ನು ಪುನಃ ತೆರೆಯಲಾಗಿತ್ತು. ಆದರೆ, ದೇವಾಲಯದ ಅಧಿಕಾರಿಗಳು ಮೊದಲ ಎರಡು ದಿನ ಟಿಟಿಡಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ್ದರು. ಮೂರನೇ ದಿನ ಸ್ಥಳೀಯ ಭಕ್ತರಿಗೆ ಮಾತ್ರ ಅನುಮತಿ ನೀಡುವ ಮೂಲಕ ಪ್ರಯೋಗ ನಡೆಸಿದ್ದರು.

ಪ್ರಾಯೋಗಿಕ ಚಾಲನೆಯಲ್ಲಿನ ಲೋಪದೋಷಗಳನ್ನು ಗುರುತಿಸಿ, ಅವುಗಳನ್ನು ಸರಿಪಡಿಸಿಕೊಂಡ ನಂತರ, ಟಿಟಿಡಿ ಇಂದು ಸಾಮಾನ್ಯ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಿತು. 

ಪ್ರತಿದಿನ 6,000 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಟಿಟಿಡಿ ಸ್ಪಷ್ಟಪಡಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು