ಗುರುವಾರ , ಫೆಬ್ರವರಿ 25, 2021
17 °C

ಕೋವಿಡ್‌-19 ಬಿಕ್ಕಟ್ಟು: ಥಾಯ್ಲೆಂಡ್ ಪ್ರಧಾನಿ ಜೊತೆ ನರೇಂದ್ರ ಮೋದಿ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಥಾಯ್ಲೆಂಡ್ ಪ್ರಧಾನಿ ಜೊತೆ ಕೋವಿಡ್‌-19 ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಿರುವುದಾಗಿ ನರೇಂದ್ರ ಮೋದಿ ತಿಳಿಸಿದ್ದಾರೆ. 

ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, 'ನನ್ನ ಉತ್ತಮ ಸ್ನೇಹಿತ, ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್-ಒ-ಚಾ ಅವರೊಂದಿಗೆ ಕೋವಿಡ್‌-19ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ' ಎಂದು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ಉಂಟಾಗಿರುವ ಬಹುಮುಖಿ ಸವಾಲುಗಳನ್ನು ಒಟ್ಟಾಗಿ ಎದುರಿಸಲು ಆಳವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧ ಹೊಂದಿರುವ ಭಾರತ ಮತ್ತು ಥಾಯ್ಲೆಂಡ್ ರಾಷ್ಟ್ರಗಳು ಕೆಲಸ ಮಾಡಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು