ಬುಧವಾರ, ಆಗಸ್ಟ್ 4, 2021
20 °C

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ‌ ಜೈನ್‌ಗೆ ಕೊರೊನಾ: ಐಸಿಯುಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Satyendar Jain

ನವದೆಹಲಿ: ಕೋವಿಡ್‌–19ಗೆ ತುತ್ತಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ‌ ಜೈನ್ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು, ಅವರನ್ನು ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಿಸಲಾಗಿದೆ.

‘ಸಚಿವರಿಗೆ ನ್ಯೂಮೊನಿಯಾ ಇದ್ದು, ಆಮ್ಲಜನಕ ಪ್ರಮಾಣದಲ್ಲಿ ತೀವ್ರ ಕುಸಿತ ಕಂಡುಬಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸಚಿವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದ್ದು, ಅವರನ್ನು ಶುಕ್ರವಾರ ದಕ್ಷಿಣ ದೆಹಲಿಯ ಸಾಕೆತ್‌ ಮ್ಯಾಕ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

‘ಸಿಟಿ ಸ್ಕ್ಯಾನ್‌ ವರದಿ ಬಂದಿದ್ದು, ಶ್ವಾಸಕೋಶದ ಸಮಸ್ಯೆ ತೀವ್ರವಾಗಿದೆ. ಅವರಿಗೆ ಬಳಲಿಕೆಯ ಜೊತೆಗೆ ತಲೆನೋವು ಇದೆ. ವೈದ್ಯರ ಸಲಹೆಯನ್ನು ಪಾಲಿಸಲಾಗುವುದು’ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ. 

ತೀವ್ರ ಜ್ವರದಿಂದ ಬಳಲುತ್ತಿದ್ದ ಸಚಿವರನ್ನು ಕಳೆದ ಸೋಮವಾರ ರಾಜೀವ್‌ ಗಾಂಧಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲ ಬಾರಿಗೆ ಪರೀಕ್ಷೆ ನಡೆಸಿದಾಗ ಸೋಂಕು ಇಲ್ಲ ಎಂದು ವರದಿ ಬಂದಿತ್ತು. ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢ‍ಪಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು