ಸೋಮವಾರ, ಜುಲೈ 26, 2021
21 °C

ಸರಳವಾಗಿ ಗಣೇಶೋತ್ಸವ ಆಚರಿಸಲು ಉದ್ಧವ್‌ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

ಗಣೇಶ ಮೂರ್ತಿ ಅಂತಿಮ ಸಿದ್ಧತೆಯಲ್ಲಿರುವ ಕಲಾವಿದ–ಸಾಂದರ್ಭಿಕ ಚಿತ್ರ

ಮುಂಬೈ: ಕೋವಿಡ್‌–19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ವರ್ಷ ಗಣೇಶೋತ್ಸವವನ್ನು ಸರಳವಾಗಿ ಆಚರಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಗುರುವಾರ ಕರೆ ನೀಡಿದ್ದಾರೆ.

ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳ ಜತೆಗೆ ವಿಡಿಯೊ ಸಂವಾದ ನಡೆಸಿದ ಠಾಕ್ರೆ ಅವರು, ಸಾಮಾಜಿಕ ಜವಾಬ್ದಾರಿಗಳನ್ನು ಅರಿತು ಸರಳವಾಗಿ ಹಬ್ಬ ಆಚರಿಸುವಂತೆ ಸೂಚಿಸಿದ್ದಾರೆ.

ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಇನ್ನೂ ದೂರವಾಗಿಲ್ಲ. ಈ ಕಾರಣಕ್ಕೆ ಹಿಂದಿನ ವರ್ಷಗಳಂತೆ ಈ ಬಾರಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲು ಸಾಧ್ಯವಿಲ್ಲ. ಹಬ್ಬದ ಸಂದರ್ಭದಲ್ಲಿ ಮೆರವಣಿಗೆ ಅಥವಾ ಜನಸಂದಣಿ ಇರಬಾರದು ಎಂದಿದ್ದಾರೆ.

ಈ ಬಾರಿ ಆಗಸ್ಟ್‌ 22ರಂದು ಗಣೇಶೋತ್ಸವ ನಡೆಯಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು