ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: 24 ಗಂಟೆಗಳಲ್ಲಿ 9,985 ಹೊಸ ಪ್ರಕರಣ, 279 ಮಂದಿ ಸಾವು

ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್‌–19 ದೃಢಪಟ್ಟ 9,985 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 279 ಮಂದಿ ಸಾವಿಗೀಡಾಗಿದ್ದಾರೆ.

ಪ್ರಸ್ತುತ ದೇಶದಲ್ಲಿ ಒಟ್ಟು 2,76,583 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 1,33,632 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 1,35,206 ಮಂದಿ ಗುಣಮುಖರಾಗಿದ್ದು, 7,745 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ.

ಕರ್ನಾಟಕದಲ್ಲಿ ಇದುವರೆಗೂ ಒಟ್ಟು 5,921 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 66 ಜನರು ಮೃತಪಟ್ಟಿದ್ದಾರೆ. 3,251 ಸಕ್ರಿಯ ಪ್ರಕರಣಗಳಿದ್ದು, 2,604 ಜನರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 90,787 ಪ್ರಕರಣಗಳು ಬೆಳಕಿಗೆ ಬಂದಿದ್ದು,3,289 ಜನರು ಮೃತರಾಗಿದ್ದಾರೆ. 44,860 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 42,638 ಮಂದಿ ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ 34,914 ಮಂದಿಗೆ ಸೋಂಕು ತಗುಲಿದ್ದು, 16,282 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 307 ಮಂದಿ ಮೃತಪಟ್ಟಿದ್ದು, 18,325 ಜನ ಗುಣಮುಖರಾಗಿದ್ದಾರೆ. ಗುಜರಾತ್‌ನಲ್ಲಿ 21,014 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 5,336 ಸಕ್ರಿಯ ಪ್ರಕರಣಗಳಿದ್ದು, 14,365 ಮಂದಿ ಗುಣಮುಖರಾಗಿದ್ದಾರೆ. 1,313 ಜನರು ಮೃತಪಟ್ಟಿದ್ದಾರೆ. ದೆಹಲಿಯಲ್ಲಿ 18,543 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 31,309 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 905 ಜನರು ಮೃತಪಟ್ಟಿದ್ದಾರೆ, 11,861ಮಂದಿ ಗುಣಮುಖರಾಗಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 420, ಪಶ್ಚಿಮ ಬಂಗಾಳದಲ್ಲಿ 415, ಉತ್ತರ ಪ್ರದೇಶದಲ್ಲಿ 301 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT