ಗುರುವಾರ , ಜುಲೈ 29, 2021
26 °C
ಕೋವಿಡ್‌ ಹಿನ್ನೆಲೆಯಲ್ಲಿ ವೆಚ್ಚ ಕಡಿತಕ್ಕೆ ಮುಂದಾದ ಸರ್ಕಾರ

ಉತ್ತರಾಖಂಡ: ಹೊಸ ನೇಮಕಾತಿಗಳಿಗೆ ತಡೆ; ನೌಕರರಿಗೆ ವೇತನ ಹೆಚ್ಚಳವಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್‌: ಕೋವಿಡ್‌-19 ಮತ್ತು ಲಾಕ್‌ಡೌನ್‌ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ಉತ್ತರಾಖಂಡ ಸರ್ಕಾರವು ಆರೋಗ್ಯ ಮತ್ತು ಪೊಲೀಸ್ ಹೊರತುಪಡಿಸಿ ಇತರ ಇಲಾಖೆಗಳಲ್ಲಿ ನೌಕರರಿಗೆ ವೇತನ ಹೆಚ್ಚಳ ಮಾಡದಿರಲು ನಿರ್ಧರಿಸಿದೆ. ಅಲ್ಲದೆ ಈ ಇಲಾಖೆಗಳಲ್ಲಿ ಸದ್ಯಕ್ಕೆ ಹೊಸ ನೇಮಕಾತಿಯನ್ನೂ ಮಾಡಿಕೊಳ್ಳದಿರಲು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ಪಲ್‌ ಕುಮಾರ್‌ ಸಿಂಗ್‌ ಅವರು ವೆಚ್ಚ ಕಡಿತಕ್ಕೆ ಸಂಬಂಧಿಸಿದ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿರುವ ಕಾರಣ ಅನಗತ್ಯ ಹುದ್ದೆಗಳನ್ನು ರದ್ದುಗೊಳಿಸಬೇಕು ಹಾಗೂ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಇತರ ಇಲಾಖೆಗಳಿಗೆ ಸ್ಥಳಾಂತರಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಸ್ಟೇಷನರಿ, ಪ್ರಯಾಣ ಮತ್ತು ಪೀಠೋಪಕರಣಗಳ ವೆಚ್ಚವನ್ನು ಕಡಿಮೆ ಮಾಡುವುದರ ಜೊತೆಗೆ ಪ್ರಚಾರ, ಜಾಹೀರಾತು ಮತ್ತು ವಿದೇಶ ಪ್ರವಾಸಗಳಿಗೆ ನಿರ್ಬಂಧ ಹೇರಬೇಕು. ದಿನಚರಿ ಪುಸ್ತಕಗಳು, ದಿನದರ್ಶಿಗಳು ಮತ್ತು ಶುಭಾಶಯ ಪತ್ರಗಳನ್ನು ಖರೀದಿಸುವ ವೆಚ್ಚವನ್ನು ನಿಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ವೇತನ ಹೆಚ್ಚಳಕ್ಕೆ ಕಾರಣವಾಗುವ ಬಡ್ತಿಗಳಿಗೆ ಅನುಮತಿ ನೀಡುವುದಿಲ್ಲ. ಭದ್ರತಾ ಉದ್ದೇಶಗಳಿಗೆ ಹೊರತುಪಡಿಸಿ ಇಲಾಖೆಗಳಿಂದ ವಾಹನಗಳ ಖರೀದಿಗೂ ಅನುಮತಿ ನೀಡುವುದಿಲ್ಲ ಎಂದು ಹೇಳಲಾಗಿದೆ.

ಅಲ್ಲದೆ ಸರ್ಕಾರಿ ಕಾರ್ಯಾಗಾರಗಳು, ವಿಚಾರ ಸಂಕಿರಣ ಮತ್ತು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಯಾವುದೇ ಕಾರಣಕ್ಕೂ ಹೋಟೆಲ್‌ಗಳಲ್ಲಿ ಮಾಡುವಂತಿಲ್ಲ. ಬದಲಿಗೆ ಸರ್ಕಾರಿ ಕಟ್ಟಡಗಳಲ್ಲಿಯೇ ಅವುಗಳನ್ನು ಆಯೋಜಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು