ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೆಹಲಿಯಲ್ಲಿ 3,000 ಗಡಿದಾಟಿದ ಸೋಂಕಿತರ ಸಂಖ್ಯೆ

ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ 4,90,401 ಸೋಂಕಿತರಿದ್ದು ಸಾವಿನ ಸಂಖ್ಯೆ 15301 ಆಗಿದೆ.

ದೆಹಲಿಯಲ್ಲಿ ಶುಕ್ರವಾರ ಹೊಸತಾಗಿ 3460 ಪ್ರಕರಣಗಳು ಪತ್ತೆಯಾಗಿವೆ.63 ಮಂದಿ ಸಾವಿಗೀಡಾಗಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 77240 ಆಗಿದ್ದು ಮೃತಪಟ್ಟವರ ಸಂಖ್ಯೆ 2492 ಆಗಿದೆ.

ಮಹಾರಾಷ್ಟ್ರದಲ್ಲಿ 5024 ಹೊಸ ಪ್ರಕರಣಗಳು ವರದಿ ಆಗಿದ್ದು, 175 ಮಂದಿ ಸಾವಿಗೀಡಾಗಿದ್ದಾರೆ. 2362 ರೋಗಿಗಳು ಇಂದು ಗುಣಮುಖರಾಗಿದ್ದಾರೆ.ಮಧ್ಯಪ್ರದೇಶದಲ್ಲಿ 203 ಹೊಸ ಪ್ರಕರಣಗಳು ದಾಖಲಾಗಿದ್ದು 4 ಮಂದಿ ಸಾವಿಗೀಡಾಗಿದ್ದಾರೆ, ಒಟ್ಟು ಸೋಂಕಿತರ ಸಂಖ್ಯೆ 12,798 ಆಗಿದೆ, ಸಾವಿನ ಸಂಖ್ಯೆ 546ಕ್ಕೇರಿದೆ ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಗುಜರಾತ್‌ನಲ್ಲಿ 18 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 580 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 30158 ಆಗಿದ್ದು 1772 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ಬಂಗಾಳದಲ್ಲಿ ಒಂದೇ ದಿನ ಗರಿಷ್ಠ ಸೋಂಕು ಪ್ರಕರಣಗಳು ಪತ್ತೆಯಾಗಿವೆ.542 ಹೊಸ ಪ್ರಕರಣಗಳು ಪತ್ತೆಯಾಗಿವೆ. 10 ಮಂದಿ ಸಾವಿಗೀಡಾಗಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 16190 ಆಗಿದ್ದು, 616 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,039 ಆಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಪಂಜಾಬ್‌ನಲ್ಲಿ ಇಂದು188 ಹೊಸ ಪ್ರಕರಣಗಳು ದಾಖಲಾಗಿದ್ದು 4,957 ಸೋಂಕು ಪ್ರಕರಣಗಳಿವೆ. ಮೃತಪಟ್ಟವರ ಸಂಖ್ಯೆ 112 ಆಗಿದೆ. ತಮಿಳುನಾಡಿನಲ್ಲಿ 3,523 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 74,622 ಆಗಿದೆ.32,305 ಸಕ್ರಿಯ ಪ್ರಕರಣಗಳು ಇವೆ.ಕಳೆದ 24 ಗಂಟೆಗಳಲ್ಲಿ 46 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 957 ಆಗಿದೆ.

ಕೇರಳದಲ್ಲಿ ಶುಕ್ರವಾರ 150 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,846 ಆಗಿದೆ. 114 ಕೋವಿಡ್ ಹಾಟ್‌ಸ್ಪಾಟ್‌ಗಳಿವೆ ಎಂದು ಕೇರಳದ ಆರೋಗ್ಯ ಸಚಿವಾಲಯ ಹೇಳಿದೆ.

ಆಂಧ್ರ ಪ್ರದೇಶದಲ್ಲಿ 605 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 11,000 ಆಗಿದೆ. 10 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 146 ಆಗಿದೆ.

ಜೂನ್‌ 24ರ ವರೆಗೂ 75,60,782 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 2,07,871 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಹೇಳಿದೆ.

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,42,900 ಪ್ರಕರಣಗಳು ದಾಖಲಾಗಿದ್ದು, 62,69 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 73,792 ಮಂದಿ ಗುಣಮುಖರಾಗಿದ್ದು, 6,739 ಜನರು ಮೃತರಾಗಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 70,390 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 26,588 ಸಕ್ರಿಯ ಪ್ರಕರಣಗಳಿದ್ದು, 41,437 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,365 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT