ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 3,59,860 ಮಂದಿ ಗುಣಮುಖ; 2,26,947 ಸಕ್ರಿಯ ಪ್ರಕರಣ

ಅಕ್ಷರ ಗಾತ್ರ

ಬೆಂಗಳೂರು: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 19,148 ಕೋವಿಡ್‌–19 ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿದ್ದು, 434 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಒಟ್ಟು 6,04,641 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ17,834ಕ್ಕೆ ಏರಿಕೆಯಾಗಿದೆ. ಸದ್ಯ 2,26,947 ಪ್ರಕರಣಗಳು ಸಕ್ರಿಯವಾಗಿದ್ದು, 3,59,860 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,80,298 ಪ್ರಕರಣಗಳು ಬೆಳಕಿಗೆ ಬಂದಿದ್ದು, 79,091 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 93,154 ಮಂದಿ ಗುಣಮುಖರಾಗಿದ್ದು, 8,053 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ 33,232 ಜನರಿಗೆ ಸೋಂಕು ತಗುಲಿದೆ. 7,335 ಸಕ್ರಿಯ ಪ್ರಕರಣಗಳಿದ್ದು, 24,030 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,867 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 89,802 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 27,007 ಸಕ್ರಿಯ ಪ್ರಕರಣಗಳಿದ್ದು, 59,992 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,803 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಒಟ್ಟಾರೆ 94,049 ಮಂದಿಗೆ ಸೋಂಕು ತಗುಲಿದ್ದು, 39,859 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 52,926 ಗುಣಮುಖರಾಗಿದ್ದು, 1,264 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 581, ಪಶ್ಚಿಮ ಬಂಗಾಳದಲ್ಲಿ 683, ಉತ್ತರ ಪ್ರದೇಶದಲ್ಲಿ 718 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT