ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ 18,601 ಕೊರೊನಾ ಪ್ರಕರಣ, 3,251 ಮಂದಿ ಗುಣಮುಖ

Last Updated 21 ಏಪ್ರಿಲ್ 2020, 5:02 IST
ಅಕ್ಷರ ಗಾತ್ರ

ನವದೆಹಲಿ: ಏಪ್ರಿಲ್‌ 20ರ ಸಂಜೆ 5ರಿಂದ ಏಪ್ರಿಲ್‌ 21 ಬೆಳಿಗ್ಗೆ 8ರ ವರೆಗೂ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 954 ಹೊಸ ಪ್ರಕರಣಗಳು ವರದಿಯಾಗಿವೆ. ಸೋಂಕಿಗೆ 31 ಮಂದಿ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 1,336 ಹೊಸ ಪ್ರಕರಣ ಹಾಗೂ 47 ಸಾವು ದಾಖಲಾಗಿದೆ.ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 18,601ಕ್ಕೆ ಏರಿಕೆಯಾಗಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯದ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ದೇಶದಾದ್ಯಂತ ದಾಖಲಾಗಿರುವ ಒಟ್ಟು 18,601 ಕೋವಿಡ್‌–19 ಪ್ರಕರಣಗಳ ಪೈಕಿ 3,251 ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 14,759 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 590 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 4,666 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 232 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನೂ ದೆಹಲಿಯಲ್ಲಿ ಒಟ್ಟು 2,081 ಪ್ರಕರಣಗಳು, 47 ಮಂದಿ ಸಾವು; ತಮಿಳುನಾಡಿನಲ್ಲಿ 1,520 ಪ್ರಕರಣಗಳು,17 ಮಂದಿ ಸಾವು; ರಾಜಸ್ಥಾನದಲ್ಲಿ 1,576 ಪ್ರಕರಣಗಳು, 25 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 408 ಸೋಂಕು ಪ್ರಕರಣಗಳು ದಾಖಲಾಗಿದ್ದು,16 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,485 ಸೋಂಕು ಪ್ರಕರಣಗಳ ಪೈಕಿ 74 ಮಂದಿ ಬಲಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ 722 ಪ್ರಕರಣ, 20 ಮಂದಿ ಸಾವು ಹಾಗೂ ತೆಲಂಗಾಣದಲ್ಲಿ 873 ಪ್ರಕರಣಗಳು, 23 ಜನ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣ 1,184 ತಲುಪಿದ್ದು,18 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT