ಬುಧವಾರ, ಸೆಪ್ಟೆಂಬರ್ 29, 2021
21 °C

ದೇಶದಲ್ಲಿ 24 ಗಂಟೆಗಳಲ್ಲಿ 1,553 ಜನರಿಗೆ ಕೊರೊನಾ ಸೋಂಕು; 17,000 ದಾಟಿದ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಬೈಲ್‌ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್‌–19 ಸೋಂಕು ಪರೀಕ್ಷೆಗೆ ಮಾದರಿ ಸಂಗ್ರಹಿಸುತ್ತಿರುವುದು– ಸಂಗ್ರಹ ಚಿತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,553 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿಗೆ 36 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 543 ಮುಟ್ಟಿದೆ. 

ಒಂದೇ ದಿನದಲ್ಲಿ 1,500ಕ್ಕೂ ಹೆಚ್ಚು ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ವರದಿಯಾಗಿದೆ. ಸೋಮವಾರ ಸಂಜೆ 4ರ ವರೆಗೂ ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 17,265ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್‌ ಮಾಹಿತಿ ನೀಡಿದ್ದಾರೆ. 

ದೇಶದಾದ್ಯಂತ ದಾಖಲಾಗಿರುವ ಒಟ್ಟು 17,265 ಕೋವಿಡ್‌–19 ಪ್ರಕರಣಗಳ ಪೈಕಿ 2,546 ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 14,175 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 543 ಮಂದಿ ಮೃತಪಟ್ಟಿದ್ದಾರೆ. 

ಮಹಾರಾಷ್ಟ್ರದಲ್ಲಿ ಒಟ್ಟು 4,203 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 223 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನೂ ದೆಹಲಿಯಲ್ಲಿ ಒಟ್ಟು2,003 ಪ್ರಕರಣಗಳು, 45 ಮಂದಿ ಸಾವು; ತಮಿಳುನಾಡಿನಲ್ಲಿ 1,477 ಪ್ರಕರಣಗಳು,15 ಮಂದಿ ಸಾವು; ರಾಜಸ್ಥಾನದಲ್ಲಿ 1,478 ಪ್ರಕರಣಗಳು,14 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 390 ಸೋಂಕು ಪ್ರಕರಣಗಳು ದಾಖಲಾಗಿದ್ದು,16 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,407 ಸೋಂಕು ಪ್ರಕರಣಗಳ ಪೈಕಿ 70 ಮಂದಿ ಬಲಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ 646 ಪ್ರಕರಣ,15 ಮಂದಿ ಸಾವು ಹಾಗೂ ತೆಲಂಗಾಣದಲ್ಲಿ 844 ಪ್ರಕರಣಗಳು,18 ಜನ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣ 1,084 ತಲುಪಿದ್ದು,17 ಮಂದಿ ಮೃತಪಟ್ಟಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು