ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 21,000 ದಾಟಿದ ಸೋಂಕು ಪ್ರಕರಣ,ಒಂದೇ ದಿನ 41 ಮಂದಿ ಸಾವು

Last Updated 23 ಏಪ್ರಿಲ್ 2020, 3:50 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 1,409 ಹೊಸ ಪ್ರಕರಣಗಳು ವರದಿಯಾಗಿವೆ. ಬುಧವಾರಕ್ಕೆ ಹೋಲಿಸಿದರೆ ಇಂದು ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ದೇಶದಲ್ಲಿ ಒಂದೇ ದಿನ 1,409 ಪ್ರಕರಣ ದಾಖಲಾಗುವ ಮೂಲಕ ಒಟ್ಟು ಸೋಂಕು ಪ್ರಕರಣಗಳು 21,393ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ ಸೋಂಕಿನಿಂದ 41 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯದ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 2,407 ಮುಟ್ಟಿದ್ದು, 103 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಹಾರಾಷ್ಟ್ರದ ನಂತರ ಗುಜರಾತ್‌ ಕೊರೊನಾ ಹಾಟ್‌ಸ್ಪಾಟ್‌ ಆಗಿ ಪರಿಣಮಿಸಿದೆ.

ದೇಶದಾದ್ಯಂತ ದಾಖಲಾಗಿರುವ ಒಟ್ಟು 21,393 ಕೋವಿಡ್‌–19 ಪ್ರಕರಣಗಳ ಪೈಕಿ 4,257 ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 16,454 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 681 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 5,652 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 269 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನೂ ದೆಹಲಿಯಲ್ಲಿ ಒಟ್ಟು 2,248 ಪ್ರಕರಣಗಳು, 48 ಮಂದಿ ಸಾವು; ತಮಿಳುನಾಡಿನಲ್ಲಿ 1,629 ಪ್ರಕರಣಗಳು,18 ಮಂದಿ ಸಾವು; ರಾಜಸ್ಥಾನದಲ್ಲಿ 1,890 ಪ್ರಕರಣಗಳು, 27 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 427 ಸೋಂಕು ಪ್ರಕರಣಗಳು ದಾಖಲಾಗಿದ್ದು,17 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,592 ಸೋಂಕು ಪ್ರಕರಣಗಳ ಪೈಕಿ 80 ಮಂದಿ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದಲ್ಲಿ 813 ಪ್ರಕರಣ, 24 ಮಂದಿ ಸಾವು ಹಾಗೂ ತೆಲಂಗಾಣದಲ್ಲಿ 945 ಪ್ರಕರಣಗಳು, 23 ಜನ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣ 1,449 ತಲುಪಿದ್ದು, 21 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT