ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ 24 ಗಂಟೆಗಳಲ್ಲಿ 1,383 ಹೊಸ ಪ್ರಕರಣ; 50 ಮಂದಿ ಸಾವು

Last Updated 22 ಏಪ್ರಿಲ್ 2020, 5:18 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 1,383 ಹೊಸ ಪ್ರಕರಣಗಳು ವರದಿಯಾಗಿವೆ. ಸೋಂಕಿಗೆ 50 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಂದೇ ದಿನ 1,383 ಪ್ರಕರಣ ದಾಖಲಾಗುವ ಮೂಲಕ ಒಟ್ಟು ಸೋಂಕು ಪ್ರಕರಣಗಳು 19,984ಕ್ಕೆ ಏರಿಕೆಯಾಗಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯದ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ದೇಶದಾದ್ಯಂತ ದಾಖಲಾಗಿರುವ ಒಟ್ಟು 19,984 ಕೋವಿಡ್‌–19 ಪ್ರಕರಣಗಳ ಪೈಕಿ 3,869 ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 15,474 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 640 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 5,218 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 251 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನೂ ದೆಹಲಿಯಲ್ಲಿ ಒಟ್ಟು 2,156 ಪ್ರಕರಣಗಳು, 47 ಮಂದಿ ಸಾವು; ತಮಿಳುನಾಡಿನಲ್ಲಿ 1,596 ಪ್ರಕರಣಗಳು,18 ಮಂದಿ ಸಾವು; ರಾಜಸ್ಥಾನದಲ್ಲಿ 1,659 ಪ್ರಕರಣಗಳು, 25 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 418 ಸೋಂಕು ಪ್ರಕರಣಗಳು ದಾಖಲಾಗಿದ್ದು,17 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,552 ಸೋಂಕು ಪ್ರಕರಣಗಳ ಪೈಕಿ 76 ಮಂದಿ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದಲ್ಲಿ 757 ಪ್ರಕರಣ, 22 ಮಂದಿ ಸಾವು ಹಾಗೂ ತೆಲಂಗಾಣದಲ್ಲಿ 928 ಪ್ರಕರಣಗಳು, 23 ಜನ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣ 1,294 ತಲುಪಿದ್ದು, 20 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT