ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: 24 ಗಂಟೆಗಳಲ್ಲಿ ಉ.ಪ್ರದೇಶದಲ್ಲಿ 389 ಪ್ರಕರಣ,18 ಸಾವು

ಅಕ್ಷರ ಗಾತ್ರ

ನವದೆಹಲಿ:ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 389 ಹೊಸ ಪ್ರಕರಣಗಳು ವರದಿಯಾಗಿವೆ. 325 ರೋಗಿಗಳು ಚೇತರಿಸಿಕೊಂಡಿದ್ದು 18 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೆ ಕೊರೊನಾ ರೋಗಿಗಳ ಸಂಖ್ಯೆ 11,335 ಆಗಿದ್ದ 301 ಮಂದಿ ಮೃತಪಟ್ಟಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ ಮಾಹಿತಿ ಪ್ರಕಾರ ದೇಶದಾದ್ಯಂತ ಒಟ್ಟು 129813 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 7471 ಆಗಿದೆ.129313 ಮಂದಿ ಚೇತರಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,943ಕ್ಕೇರಿದೆ.

ಗುಜರಾತಿನಲ್ಲಿ ಕಳೆದ 24 ಗಂಟೆಗಳಲ್ಲಿ 33 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 1,313ಕ್ಕೇರಿದೆ, 470 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳು 21,004 ಆಗಿದೆ.

ಪಶ್ಚಿಮ ಬಂಗಾಳದಲ್ಲಿ 372 ಹೊಸ ಪ್ರಕರಣಗಳು ವರದಿಯಾಗಿದ್ದು ಇಲ್ಲಿಯವರೆಗೆ 415 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 8985 ಆಗಿದೆ.

ಮಹಾರಾಷ್ಟ್ರದಲ್ಲಿ ಮಂಗಳವಾರ 2259 ಹೊಸ ಪ್ರಕರಣಗಳು ವರದಿಯಾಗಿದ್ದು 120 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 90787 ಆಗಿದ್ದು ಇಲ್ಲಿಯವರೆಗೆ 3289 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 4,346 ಆಗಿದೆ. ಇಲ್ಲಿಯವರೆಗೆ 48 ಮಂದಿ ಸಾವಿಗೀಡಾಗಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ 5 ಹೊಸ ಪ್ರಕರಣ ಪತ್ತೆಯಾಗಿದ್ದು, ಪ್ರಕರಣಗಳ ಸಂಖ್ಯೆ 127 ಆಗಿದೆ.

ಆಂಧ್ರ ಪ್ರದೇಶದಲ್ಲಿ ಇಂದು 216 ಹೊಸ ಪ್ರಕರಣ ವರದಿಯಾಗಿದ್ದು ಪ್ರಕರಣಗಳ ಸಂಖ್ಯೆ 5,000 ಗಡಿ ದಾಟಿದೆ. ಕೃಷ್ಣ ಮತ್ತು ಅನಂತಪುರಮು ಜಿಲ್ಲೆಯಲ್ಲಿ ಎರಡು ರೋಗಿಗಳು ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 77ಕ್ಕೇರಿದೆ.

ಲೇಹ್ ಜಿಲ್ಲೆಯಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದ್ದು ಲಡಾಖ್‌ನಲ್ಲಿ ಸೋಂಕಿತರ ಸಂಖ್ಯೆ108 ಆಗಿದೆ.ತಮಿಳುನಾಡಿನಲ್ಲಿ ಇಂದು 21 ಮಂದಿ ಮೃತಪಟ್ಟಿದ್ದಾರೆ, 1685 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 34,914 ಆಗಿದೆ.

ಚಂಡೀಗಡದಲ್ಲಿ 5 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 323 ಆಗಿದೆ. ಕೇರಳದಲ್ಲಿ 91 ಹೊಸ ಪ್ರಕರಣಗಳು ವರದಿ ಆಗಿದ್ದು ಸೋಂಕಿತರ ಸಂಖ್ಯೆ 1,231 ಆಗಿದೆ. ಇಲ್ಲಿಯವರೆಗೆ 848 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT