ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India update | ದೆಹಲಿಯಲ್ಲಿ 70,000 ಗಡಿದಾಟಿದ ಸೋಂಕಿತರ ಸಂಖ್ಯೆ

Last Updated 24 ಜೂನ್ 2020, 17:17 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿ ಕಳೆದ 24 ಗಂಟೆಗಳಲ್ಲಿ 49 ಹೊಸ ಪ್ರಕರಣಗಳು ವರದಿಯಾಗಿವೆ.ಒಟ್ಟು 970 ಸೋಂಕಿತರಿದ್ದು 642 ಸಕ್ರಿಯ ಪ್ರಕರಣಗಳಿವೆ. 328 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ದೆಹಲಿಯಲ್ಲಿ 3,788 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 70,000 ದಾಟಿದೆ. ಸಾವಿನ ಸಂಖ್ಯೆ 2,365 ಆಗಿದೆ.
ಮಿಜೋರಾಂನಲ್ಲಿ 3 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 145ಕ್ಕೇರಿದೆ.ಮಹಾರಾಷ್ಟ್ರದಲ್ಲಿ 139010 ಸೋಂಕಿತರಿದ್ದು ಇಲ್ಲಿಯವರೆಗೆ 6531 ಮಂದಿ ಸಾವಿಗೀಡಾಗಿದ್ದಾರೆ.

ಕೇರಳದಲ್ಲಿ ಒಂದೇ ದಿನ 152 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 6 ದಿನಗಳಲ್ಲಿ ಪ್ರತಿದಿನ 100ಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು ಸೋಂಕಿತರ ಸಂಖ್ಯೆ 3603 ಆಗಿದೆ. ಈ ಪೈಕಿ 1691 ಸಕ್ರಿಯ ಪ್ರಕರಣಗಳಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ದೇಶದಲ್ಲಿ ಕೊರೊನಾವೈರಸ್‌ನಿಂದ ಸಾವಿಗೀಡಾದವರ ಸಂಖ್ಯೆ 14476 ಆಗಿದೆ. ಒಟ್ಟು 456183 ಸೋಂಕಿತರು ಇದ್ದು, 183022 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 15,968 ಜನರಲ್ಲಿ ಸೋಂಕು ದೃಡಪಟ್ಟಿದ್ದು, 465 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬೆಳಿಗ್ಗೆ ಹೇಳಿದೆ. ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT