ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update| ದೇಶದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ

Last Updated 27 ಜೂನ್ 2020, 16:24 IST
ಅಕ್ಷರ ಗಾತ್ರ

ದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯು ಸಕ್ರಿಯ ಸಂಖ್ಯೆಗಳಿಗಿಂತ ಅತಿ ವೇಗವಾಗಿ ಹೆಚ್ಚುತ್ತಿದೆ. ಇವೆರಡರ ನಡುವಿನ ವ್ಯತ್ಯಾಸವು ಹೆಚ್ಚು ಕಡಿಮೆ ಒಂದು ಲಕ್ಷದಷ್ಟಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,97,387 ಆಗಿದ್ದರೆ, 2,95,880 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ‘ಇದು ಪ್ರೋತ್ಸಾಹದಾಯಕ ಪ್ರಮಾಣ,’ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ‘ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿತರ ಚೇತರಿಕೆಯ ಪ್ರಮಾಣವು ಶೇಕಡಾ 58.13 ಕ್ಕೆ ತಲುಪಿದೆ,’ ಎಂದು ಸಚಿವಾಲಯ ಹೇಳಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆಯು ಶನಿವಾರದ ವೇಳೆಗೆ ಸಕ್ರಿಯ ಪ್ರಕರಣಗಳಿಗಿಂತ 98,493 ರಷ್ಟು ಹೆಚ್ಚಾಗಿದೆ.

ಭಾರತದಲ್ಲಿ ಶನಿವಾರ 18,552 ಪ್ರಕರಣಗಳು ದಾಖಲಾಗಿದ್ದು ಸೋಂಕಿತರ ಸಂಖ್ಯೆ ಐದು ಲಕ್ಷ ಗಡಿ ದಾಟಿದೆ. ಶನಿವಾರ 384 ಸಾವು ಸಂಭವಿಸಿದ್ದು, ಒಟ್ಟಾರೆ ಸಂಖ್ಯೆ 15,685 ಕ್ಕೆ ಏರಿದೆ.

ಜೂನ್ 26 ರವರೆಗೆ ದೇಶದಲ್ಲಿ ಒಟ್ಟು 79,96,707 ಮಂದಿಯನ್ನು ಪರೀಕ್ಷೆ ಒಳಪಡಿಸಲಾಗಿದೆ. ಶುಕ್ರವಾರ ಒಂದೇ ದಿನ 2,20,479 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದು ಈ ವರೆಗಿನ ದಾಖಲೆ ಸಂಖ್ಯೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಐಸಿಎಂಆರ್ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 5,318 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ದಿನವೊಂದರಲ್ಲಿ ವರದಿಯಾದ ಗರಿಷ್ಟ ಸಂಖ್ಯೆಯ ಪ್ರಕರಣಗಳಿವು.

ದೇಶದ ಅಗ್ರ 5 ರಾಜ್ಯಗಳು

  1. ಮಹಾರಾಷ್ಟ್ರ–152765
  2. ದೆಹಲಿ–77240
  3. ತಮಿಳುನಾಡು– 74622
  4. ಗುಜರಾತ್‌–30095
  5. ಉತ್ತರಪ್ರದೇಶ–20943

ಕರ್ನಾಟಕ–11923

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT