ಜಡೇಜಾ ಅಕ್ಕ ಕಾಂಗ್ರೆಸ್‌ ಸೇರ್ಪಡೆ

ಶುಕ್ರವಾರ, ಏಪ್ರಿಲ್ 26, 2019
24 °C

ಜಡೇಜಾ ಅಕ್ಕ ಕಾಂಗ್ರೆಸ್‌ ಸೇರ್ಪಡೆ

Published:
Updated:
Prajavani

ಅಹಮದಾಬಾದ್‌: ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಅಕ್ಕ ನೈನಾ ಜಡೇಜ ಭಾನುವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಜಡೇಜಾ ಅವರ ಪತ್ನಿ ರಿವಾ ಅವರು ಬಿಜೆಪಿ ಸೇರಿದ್ದರು.

ಜಾಮ್‌ನಗರ ಮುಲುಕೊಂಡರಿಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಪರ ಆಯೋಜಿಸಿದ್ದ ಪ್ರಚಾರ ಸಭೆಯ ಸಂದರ್ಭದಲ್ಲಿ ತಂದೆ ಅನಿರುದ್ಧಸಿಂಗ್‌ ಜಡೇಜಾ ಮತ್ತು ಮುಖಂಡ ಹಾರ್ದಿಕ್‌ ಪಟೇಲ್‌ ಸಮ್ಮುಖದಲ್ಲಿ  ನೈನಾ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ನೈನಾ, ‘ಬಿಜೆಪಿಯು ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಆ ಕಾರಣಕ್ಕೆ ನಾನು ಕಾಂಗ್ರೆಸ್‌ ಅಭ್ಯರ್ಥಿಯ ಪರ ಪ್ರಚಾರ ಮಾಡುವೆ’ ಎಂದಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿಯು ಕಾಂಗ್ರೆಸ್‌ ಮುಖಂಡರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಅಭಿಯಾನದಂತೆ ನಡೆಸುತ್ತಿದ್ದು, ಕಾಂಗ್ರೆಸ್‌ನ ಐವರು ಶಾಸಕರು ಈಗಾಗಲೇ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷಾಂತರ ಮಾಡಿಸುವ ಮೂಲಕ ತಳಮಟ್ಟದಲ್ಲೇ ಕಾಂಗ್ರೆಸ್‌ ಅನ್ನು ದುರ್ಬಲಗೊಳಿಸಲು ಬಿಜೆಪಿ ಶ್ರಮಿಸುತ್ತಿದೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !